Friday, January 16, 2026
Friday, January 16, 2026

ಶೀರೂರು ಪರ್ಯಾಯ ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ

ಶೀರೂರು ಪರ್ಯಾಯ ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ

Date:

ಉಡುಪಿ, ಜ.15: ಶೀರೂರು ಪರ್ಯಾಯದ ವಿದ್ಯುತ್ ದೀಪಾಲಂಕಾರದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಸ್ವರೂಪ ಟಿ ಕೆ‌ ನೆರವೇರಿಸಿದರು. ಬಳಿಕ‌ ಮಾತನಾಡಿದ ಅವರು, ಮೊದಲ‌ ಬಾರಿಗೆ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಸಿಂಗಾರಗೊಂಡ‌ ನಗರಗಳು, ಪರ್ಯಾಯದ ಸಿದ್ಧತೆಗಳು ಅತ್ಯಂತ ವ್ಯವಸ್ಥಿತವಾಗಿ‌ ನಡೆಯುತ್ತಿರುವುದು ಸಂತೋಷವಾಗಿದೆ ಎಂದರು. ನಗರದ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ ಪರ್ಯಾಯ ಕಾರ್ಯಕ್ರಮಕ್ಕೆ‌ ಹೆಚ್ವಿನ ಮೆರುಗು ನೀಡಲು ಈ ಬಾರಿ ವಿಶೇಷ ವಿದ್ಯುದ್ದೀಪಾಲಂಕಾರ ಮಾಡಲಾಗಿದೆ ಎಂದರು. ಅದೇ ರೀತಿ ವಿದ್ಯುದ್ದೀಪಾಲಂಕಾರ ವ್ಯವಸ್ಥೆ ಮಾಡಿದ ಕೃಷ್ಣ ಕುಲಾಲ್ ಅವರನ್ನು ಶಾಸಕರು ಅಭಿನಂದಿಸಿದರು.

ಶೀರೂರು ಪರ್ಯಾಯಕ್ಕೆ‌ ಉಡುಪಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದರ‌ ಮೆರುಗು ಹೆಚ್ಚಿಸಲು ಈ ಬಾರಿ ಉಡುಪಿ‌ ನಗರಸಭೆ ಅನುದಾನದೊಂದಿಗೆ 50 ಲಕ್ಷ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಕೆನರಾ ಬ್ಯಾಂಕ್ ನ ಜಿ ಎಂ ಗಂಗಾಧರ್, ನಗರಸಭೆ ಆಯುಕ್ತ ಮಹಾಂತೇಶ್, ನಗರಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರಜನಿ ಹೆಬ್ಬಾರ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರ್, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಮಹಿಳಾ‌ ಘಟಕದ ಪದ್ಮಲತಾ, ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಪ್ರಚಾರ ಸಮಿತಿ‌ ಸಂಚಾಲಕ ನಂದನ್ ಜೈನ್, ವಿಷ್ಣುಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಉಡುಪಿಗೆ ಬನ್ನಿ’ ಕ್ಯಾಲೆಂಡರ್ ಬಿಡುಗಡೆ

ಉಡುಪಿ, ಜ.16: ಶ್ರೀ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ...

ಹೊಸ ಮೆರುಗಿನೊಂದಿಗೆ ಉಡುಪಿ ರೈಲು ನಿಲ್ದಾಣ ಪ್ರಯಾಣಿಕರಿಗೆ ಲಭ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಜ.14: ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹು ದಿನಗಳ ಬೇಡಿಕೆ...

ಸಂಜೀವಿನಿ ಮಹಿಳೆಯರ ಕ್ರೀಡಾಕೂಟ

ಉಡುಪಿ, ಜ.15: ರಾಷ್ಟ್ರಿಯ ಗ್ರಾಮೀಣ ಜೀವನೋಪಾಯ ಅಭಿಯಾನ -ಸಂಜೀವಿನಿ, ಸ್ವರ್ಣ ಸಂಜೀವಿನಿ...

ಜಿಲ್ಲಾ ಮಟ್ಟದ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

ಉಡುಪಿ, ಜ.15: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ...
error: Content is protected !!