Wednesday, March 25, 2026
Wednesday, March 25, 2026

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

Date:

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು ಭೋವಿ ಸಮಾಜದವರು ಸೇರಿದಂತೆ ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘ (ರಿ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಹನ್ನೆರಡನೆಯ ಶತಮಾನದ ಪ್ರಮುಖ ಪಂಚ ಶಿವಶರಣರಲ್ಲಿ ಒಬ್ಬರಾದ ಶಿವಯೋಗಿ ಸಿದ್ಧರಾಮ ಅವರು ಮಾನವರೆಲ್ಲರೂ ಸಮಾನರು ಎಂಬ ಪರಿಕಲ್ಪನೆಯ ಮೇರೆಗೆ ವಚನ ಸಾಹಿತ್ಯವನ್ನು ರಚಿಸುವುದರೊಂದಿಗೆ ಸಮುದಾಯದ ನಾಯಕರಾದರು. ವಚನ ಸಾಹಿತ್ಯ ಚಳುವಳಿಯ ಸಂದರ್ಭದಲ್ಲಿ ಉಂಟಾದ ಸಾಮಾಜಿಕ ಕ್ರಾಂತಿಯಿಂದ ಶಿವಶರಣೆಯರು ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸವನ್ನು ತಮ್ಮ ವಚನಗಳ ಮೂಲಕ ಮಾಡಿದರು ಎಂದರು.

ಈ ಹಿಂದೆ ಇದ್ದಂತಹ ಶಿವಶರಣರ ಜೀವನ ಆದರ್ಶಗಳನ್ನು ಪಾಲಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಮಹನೀಯರುಗಳ ಜಯಂತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಚದುರಿಹೋದ ಸಂಘಟನೆಗಳು ಒಗ್ಗೂಡಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದ ಅವರು, ಶ್ರಮ ಜೀವಿಗಳಾದ ಭೋವಿ ಸಮುದಾಯದವರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ರಾಜ್ ಕುಮಾರ್ ಪೆರ್ಣಂಕಿಲ ಮಾತನಾಡಿ, ಶಿವಯೋಗಿ ಸಿದ್ಧರಾಮ ಅವರನ್ನು ಭೋವಿ ಜನಾಂಗದವರು ತಮ್ಮ ಕುಲಗುರುಗಳಾಗಿ ಸ್ವೀಕರಿಸಿದ್ದಾರೆ. ಅವರು ನಡೆದು ಬಂದ ಹಾದಿಯಲ್ಲಿ ಸಮಾಜದ ಪ್ರತಿಯೊಬ್ಬರೂ ನಡೆಯಬೇಕು. ಶ್ರಮ ಜೀವಿಗಳಿಗೆ ಬೆಲೆಯಿದೆ ಎಂದು ಭೋವಿ ಸಮುದಾಯದವರು ತೋರಿಸಿಕೊಟ್ಟಿದ್ದಾರೆ. ಕಾಯಕವೇ ಕೈಲಾಸ ಎಂಬ ನುಡಿಯ ಅಡಿಯಲ್ಲಿ ಭೋವಿ ಸಮುದಾಯದವರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು. ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಜಗದೀಶ ಪರ್ಕಳ ಉಪನ್ಯಾಸ ನೀಡಿ ಮಾತನಾಡುತ್ತಾ, ಹನ್ನೆರಡನೆಯ ಶತಮಾನದ ಪ್ರಥಮ ಶ್ರೇಣಿಯ ವಚನಕಾರರಲ್ಲಿ ಒಬ್ಬರಾದ ಶಿವಯೋಗಿ ಸಿದ್ಧರಾಮ ಅವರು, ತಮ್ಮ ಕಾರ್ಯಚಟುವಟಿಕೆಗಳ ಮೂಲಕ ಗಮನಸೆಳೆದಿದ್ದರು. ಬಾಲ್ಯದಿಂದಲೇ ಮುಗ್ಧರಾಗಿದ್ದ ಇವರು ದೈವಭಕ್ತರೂ ಆಗಿದ್ದರು. ಇವರು ಜನಿಸಿದ ಸೊನ್ನಲಿಗೆ ಸ್ಥಳವು ಇಂದು ಪ್ರಸಿದ್ಧ ಧಾರ್ಮಿಕ ನಗರವಾಗಿ ಪರಿವರ್ತನೆಯಾಗಲು ಇವರೇ ಮೂಲ ಕಾರಣೀಕರ್ತರು ಎಂದರು.

ಅಪ್ಪಟ ಕನ್ನಡ ಕವಿಯಾದ ಇವರು, ಅನುಭವ ಮಂಟಪದಲ್ಲಿ ಬಸವಣ್ಣ ಸೇರಿದಂತೆ ಹಲವು ಶಿವಶರಣರ ಭೇಟಿಯಿಂದ ಜ್ಞಾನ ಮಾರ್ಗದಲ್ಲಿ ಸಾಗಿ, ಸಕಲರ ನೋವಿಗೆ ಸ್ಪಂದಿಸುವುದರೊಂದಿಗೆ ಸಾಮಾಜಿಕ ಕಾರ್ಯಗಳಾದ ಕೆರೆಕಟ್ಟೆ ಹಾಗೂ ದೇವಸ್ಥಾನ ನಿರ್ಮಾಣ, ಅಕ್ಷರ ದಾಸೋಹ ವ್ಯವಸ್ಥೆಯನ್ನು ಕಲ್ಪಿಸಿದ್ದರು. ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ತೀಡಿದ್ದಾರೆ. ಮೌಢ್ಯತೆ, ಜಾತೀಯತೆ, ಆಚಾರ-ವಿಚಾರ ಎಂಬ ಮನೋಭಾವ ಬಿಟ್ಟು ನಾವೆಲ್ಲರೂ ಮನುಷ್ಯರು, ಎಲ್ಲರೂ ಸಮಾನರು ಎಂಬ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ ಎಂದರು.

ನಿವೃತ್ತ ಭಾರತೀಯ ಸೇನೆಯ ವಿಶ್ವನಾಥ ಪೆರ್ಡೂರು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಮುದಾಯದ ವ್ಯವಸ್ಥಾಪಕ ಶಂಕರ್, ಭೋವಿ ಸಮುದಾಯದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ರಾಮಾಂಜಿ ನಿರೂಪಿಸಿ, ವರ್ಷಾ ಬಿ ಕೋಟ್ಯಾನ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ಮನು ಪಟೇಲ್ ಬಿ.ವೈ

ಉಡುಪಿ, ಮಾ.25: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ...

ಏರ್ಲಪಾಡಿ: ಗಾಳಿ ಮಳೆಗೆ ಮನೆಯ ಮೇಲೆ ಮರ ಬಿದ್ದು ಹಾನಿ

ಉಡುಪಿ, ಮಾ.25: ಮಂಗಳವಾರ ಜಿಲ್ಲೆಯ ಕೆಲವೆಡೆ ಸುರಿದ ಗಾಳಿ ಮಳೆಗೆ ಅಲ್ಲಲ್ಲಿ...

ಸಹಭಾಗೀ ಸಾಮಾಜಿಕ ಸಂಶೋಧನೆ ಇಂದಿನ ಅಗತ್ಯ: ಪ್ರೊ. ಸುನೀತಾ ವಿ

ಮಂಗಳೂರು, ಮಾ.25: ಸಮಾಜವಿಜ್ಞಾನಗಳ ಸಂಶೋಧನೆಯು ಪ್ರಶ್ನೆಗಳಿಗೆ ಮಾತ್ರ ಸೀಮಿತವಾಗದೆ ಸಂಶೋಧಕನ ಅನುಭಾವದ...

ಇನ್‌ಸ್ಪೆರ್ ಅವಾರ್ಡ್ ಸ್ಪರ್ಧೆಗೆ ಸುಜಯ್ ಗಾಣಿಗ ಆಯ್ಕೆ

ಗಂಗೊಳ್ಳಿ, ಮಾ.25: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು...
error: Content is protected !!