Monday, January 19, 2026
Monday, January 19, 2026

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

Date:

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ ಪೂಜಾ ಕೈಂಕರ್ಯ ಮತ್ತು ಸರ್ವಜ್ಞ ಪೀಠವೇರಿದ ಅತ್ಯಂತ ಕಿರಿಯ ಯತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ನಸುಕಿನ ಜಾವ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಜೋಡುಕಟ್ಟೆಯಿಂದ ಆಗಮಿಸಿದ ಪರ್ಯಾಯ ಮೆರವಣಿಗೆ ಅದ್ಭುತ ಸಂಭ್ರಮದ ಕ್ಷಣಗಳಿಗೆ ಸಾಕಗಷಿಯಾಯಿತು.

ಇದಕ್ಕೂ ಮುನ್ನ ವೇದವರ್ಧನ ತೀರ್ಥರು ದಂಡತೀರ್ಥದಲ್ಲಿ ಪುಣ್ಯಸ್ನಾನಗೈದು ಜೋಡುಕಟ್ಟೆಗೆ ಆಗಮಿಸಿದರು.

ಬಳಿಕ ಮೆರವಣಿಗೆಯಲ್ಲಿ ಸಾಗಿಬಂದು ಮೊದಲಿಗೆ ಕನಕನ‌ಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನ ಪಡೆದರು. ಬಳಿಕ ಪುತ್ತಿಗೆ ಶ್ರೀಗಳು ಶೀರೂರು ಶ್ರೀಗಳನ್ನು ಬರಮಾಡಿಕೊಂಡು ಅಕ್ಷಯ ಸೌಟು ಮತ್ತು ಮಠದ ಕೀಲಿಕೈ ಹಸ್ತಾಂತರಿಸಿದರು. ಶ್ರೀ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದ ಯತಿಗಳು ಅರಳು ಗದ್ದಿಗೆ ಸಾಂಪ್ರಾದಯಿಕ ದರ್ಬಾರ್ ನಲ್ಲಿ ಪಾಲ್ಗೊಂಡರು.

ಸರ್ವಜ್ಞ ಪೀಠವೇರಿದ ವೇದವರ್ಧನ ತೀರ್ಥರ ಜೊತೆಗೆ ಕೃಷ್ಣಾಪುರ, ಪಲಿಮಾರು, ಪೇಜಾವರ, ಕಾಣಿಯೂರು, ಸೋದೆ, ಅದಮಾರು ಶ್ರೀಗಳು ಭಾಗಿಯಾದರು. ರಾಜಾಂಗಣದಲ್ಲಿ ನಡೆದ ದರ್ಬಾರ್ ನಲ್ಲಿ‌ ದೇಶದ ವಿವಿಧ ಭಾಗಗಳ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಮೈಸೂರು ಮಹಾರಾಜ ಸಂಸದ ಯದುವೀರ ದತ್ತ ಒಡೆಯರ್ ಭಾಗಿಯಾಗಿದ್ದರು.

ದರ್ಬಾರ್ ಮುಗಿದ ಬಳಿಕ ಶೀರೂರು ಶ್ರೀಗಳು ತನ್ನ ಪ್ರಥಮ ಪರ್ಯಾಯದ ಮೊದಲ ಕೃಷ್ಣ ಪೂಜೆ ನೆರವೇರಿಸಿದರು. ಈ ಬಾರಿಯ ಹಿಂದಿನ ಪರ್ಯಾಯಗಳಿಗಿಂತಲೂ ಅಧಿಕ ಸಂಖ್ಯೆಯ ಭಕ್ತರ ಉಪಸ್ಥಿತಿಗೆ ಸಾಕ್ಷಿಯಾಯಿತು.

ಗಮನ ಸೆಳೆದ ಶಿವಶ್ರೀ ನಾಮಸಂಕೀರ್ತನೆ: ಶೀರೂರು ಪರ್ಯಾಯದ ಪ್ರಥಮ ದಿನ ಖ್ಯಾತ ಗಾಯಕಿ ​ಶಿವಶ್ರೀ​ ತೇಜಸ್ವಿ ಸೂರ್ಯರವರ ನಾಮಸಂಕೀರ್ತನೆ​ಯು ಭಾನುವಾರದಂದು ರಾಜಾಂಗಣದಲ್ಲಿ ನಡೆಯಿತು. ​ಪಕ್ಕವಾದ್ಯದಲ್ಲಿ ಹಾರ್ಮೋನಿಯಂ ಗೌರವ್ ಗಡಿಯಾರ್, ಮೃದಂಗಂ ಅನಿರುದ್ಧ ಭಟ್, ತಬಲಾ ಪ್ರದ್ಯುಮ್ನ ಕರ್ಪುರ್ ಸಹಕರಿಸಿದ್ದರು. ಅರವಿಂದ ಹೆಬ್ಬಾರ್ ಸ್ವಾಗತಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...

ಕ್ರೀಡಾ ಶಾಲೆ/ನಿಲಯ ಪ್ರವೇಶಾತಿ: ಕ್ರೀಡಾಪಟುಗಳ ಆಯ್ಕೆ

ಉಡುಪಿ, ಜ.18: 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 7 ನೇ ತರಗತಿಯಲ್ಲಿ...
error: Content is protected !!