Wednesday, September 30, 2026
Wednesday, September 30, 2026

ಜ.24: ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ 850 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ

ಜ.24: ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ 850 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ

Date:

ಉಡುಪಿ, ಜ.22: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 850 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಜನವರಿ 24 ಶನಿವಾರ ಮಧ್ಯಾಹ್ನ 3 ಗಂಟೆಗೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಅಯೋಜಿಸಿರುವುದಾಗಿ ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಸಮಾರಂಭವನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಲಕ್ಷ್ಮಣ ಕೋಡಿಕಲ್, ದ. ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷರಾದ ಮೋಹನ್ ಬೆಂಗ್ರೆ, ದ. ಕ. ಜಿಲ್ಲಾ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷರಾದ ಭರತ್ ಉಳ್ಳಾಲ, ಬಿಜೆಪಿ ಮಂಗಳೂರು ನಗರ ದಕ್ಷಿಣ ಉಪಾಧ್ಯಕ್ಷರಾದ ಗೌತಮ್ ಕೋಡಿಕಲ್, ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷರಾದ ಲೋಕೇಶ್ ಸುವರ್ಣ, ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಅನಿಲ್ ಕುಮಾರ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ...

ಮಂಗಳೂರಿನ ಎಂಆರ್‌ಪಿಎಲ್ ಸಂಕೀರ್ಣದಲ್ಲಿ ಸ್ಫೋಟ

ಮಂಗಳೂರು, ಸೆ.30: ಬುಧವಾರ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)...

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...
error: Content is protected !!