Wednesday, July 29, 2026
Wednesday, July 29, 2026

ವಿದ್ಯಾರ್ಥಿಗಳ ಸಾಧನೆಯು ಉತ್ತರವಾಗಬೇಕು: ಶಾಸಕ ರಘುಪತಿ ಭಟ್

ವಿದ್ಯಾರ್ಥಿಗಳ ಸಾಧನೆಯು ಉತ್ತರವಾಗಬೇಕು: ಶಾಸಕ ರಘುಪತಿ ಭಟ್

Date:

ಉಡುಪಿ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಬೇಕು, ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು. ಅವರ ಸಾಧನೆಯು ಎಲ್ಲ ವ್ಯಕ್ತಿಗಳ ಪ್ರಶ್ನೆಗಳಿಗೆ ಉತ್ತರವಾಗಬೇಕು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಅಭಿಪ್ರಾಯಪಟ್ಟರು. ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.

ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಲವು ಅಡೆತಡೆಗಳನ್ನು ಮೀರಿ ನಿಂತು ಇಂದು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ವಿದ್ಯಾದಾನ ಮಾಡುತ್ತಿದೆ. ಪ್ರತಿವರ್ಷ ವಿದ್ಯಾರ್ಥಿನಿಯರ ಸಂಖ್ಯೆ ಮತ್ತು ಸಾಧಕರ ಸಂಖ್ಯೆಯೂ ಹೆಚ್ಚುತ್ತಿದೆ ಇದು ಮುಂದುವರಿಯುತ್ತಿರಲಿ ಎಂದು ಹೇಳಿದರು.

ಇನ್ನೋರ್ವ ಅತಿಥಿ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಮಾತನಾಡಿ, ಈ ಶಾಲೆಯಲ್ಲಿ ಬಡತನದ ಹಿನ್ನೆಲೆಯಿಂದ ಬಂದವರೂ ಕೂಡ ಅತ್ಯುತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ. ಈ ವರ್ಷದ ಸಾಧಕಿ ಗಾಯತ್ರಿಯ ಮುಂದಿನ ವಿದ್ಯಾಭ್ಯಾಸದ ಎಲ್ಲ ಖರ್ಚುವೆಚ್ಚಗಳನ್ನು ಭರಿಸುವ ಭರವಸೆ ನೀಡಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನಿಯಾದ ಗಾಯತ್ರಿ ಮತ್ತು ಅತಿ ಹೆಚ್ಚು ಅಂಕ ಗಳಿಸಿದ 48 ವಿದ್ಯಾರ್ಥಿನಿಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಗರಸಭಾ ಸದಸ್ಯೆ ರಶ್ಮಿ ಸಿ ಭಟ್, ಎಸ್ಡಿಎಂಸಿ ಅಧ್ಯಕ್ಷೆ ವಿನೋದ ಸುವರ್ಣ, ಪ್ರಾಂಶುಪಾಲ ರುದ್ರೆ ಗೌಡ, ವಿಶ್ವನಾಥ ಬಾಯಿರಿ, ಎಸ್ಡಿಎಂಸಿ ಗೌರವಾಧ್ಯಕ್ಷೆ ತಾರಾ, ಸಾಫಲ್ಯ ಟ್ರಸ್ಟ್ ನ ಶಾಂಭವಿ ಮುಂತಾದವರು ಉಪಸ್ಥಿತರಿದ್ದರು. ಯಶಪಾಲ್ ಸುವರ್ಣ, ಸಾಪಲ್ಯ ಟ್ರಸ್ಟ್, ಆಭರಣ ಜ್ಯುವೆಲ್ಲರ್ಸ್, ಸಾಯಿರಾಂ ಟೆಕ್ಸ್ ಟೈಲ್ಸ್ ಗಳ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಹಿರಿಯ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿ, ಇಂದಿರಾ ವಂದಿಸಿದರು. ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!