ಉಡುಪಿ, ಜ.22: ಬ್ರಹ್ಮಾವರದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜಿನಲ್ಲಿ ವಿಭಾಗದ ಮುಖ್ಯಸ್ಥರಾಗಿ ಮತ್ತು ಅರ್ಥಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಭರತ್‌ರಾಜ್ ಎಸ್. ನೇಜಾರ್ ರವರು ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಪಡೆದಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. ಬಿ. ಜಯರಾಮ ಭಟ್ ಅವರ ಮಾರ್ಗದರ್ಶನದಲ್ಲಿ “ಗ್ರಾಮೀಣ ಅಭಿವೃದ್ಧಿಯಲ್ಲಿ ರಸ್ತೆಗಳ ಪಾತ್ರ – ಉಡುಪಿ ಜಿಲ್ಲೆಯಲ್ಲಿ ಒಂದು ಅಧ್ಯಯನ” ಎಂಬ ಮಹಾಪ್ರಬಂಧ ವನ್ನು ಮಂಡಿಸಿದ್ದರು. ಡಾ. ಭರತ್‌ರಾಜ್ ಎಸ್. ನೇಜಾರ್ ಅವರು ಉಷಾ ಮತ್ತು ದಿ. ಸದಾನಂದ ದಂಪತಿಗಳ ಪುತ್ರ ಹಾಗೂ ಬ್ರಹ್ಮಾವರ ಹಾರಾಡಿ ಗ್ರಾಮದ ನಿವಾಸಿಯಾಗಿದ್ದರೆ.




By
ForthFocus™