ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಐ.ಕ್ಯೂ.ಎ.ಸಿ. ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾಲೇಜಿನ ಎನ್.ಎಸ್.ಎಸ್. ಘಟಕಗಳು ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ಪರಿಸರ ರಕ್ಷಣೆಯಲ್ಲಿ ನಾಗರಿಕರ ಪಾತ್ರ ಕುರಿತಾಗಿ ಪ್ರಬಂಧ ಸ್ಪರ್ಧೆ, ಹಾಗೂ ಮಳೆಕೊಯ್ಲು, ನವೀಕರಿಸಬಹುದಾದ ಶಕ್ತಿ, ಜಾಗತಿಕ ತಾಪಮಾನ ನಿಯಂತ್ರಣದ ಕುರಿತಾಗಿ ಭಾಷಣ ಸ್ಪರ್ಧೆಯ ಜೊತೆಗೆ ಉಡುಪಿ ಅರಣ್ಯ ಇಲಾಖೆಯಿಂದ ಕೊಡಲಾದ ಸಸಿ ವಿತರಣಾ ಕಾರ್ಯಕ್ರಮ ಆಯೋಜಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತೆಂಕನಿಡಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಪರಿಸರವನ್ನು ದೇವರಂತೆ ಆರಾಧಿಸುವ ಕಾಲ ಬಂದೊದಗಿದೆ. ಪರಿಸರ ರಕ್ಷಣೆಯೇ ಇಂದಿನ ಮಾನವ ಜನಾಂಗದ ಎದುರಿಗಿರುವ ಬಲುದೊಡ್ಡದು ಎಂದರು.
ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ಪರಿಸರ ಕಾಳಜಿ ಕೇವಲ ಪರಿಸರ ದಿನಾಚರಣೆಗೆ ಸೀಮಿತವಾಗಿರದೆ ನಿತ್ಯ ನಿರಂತರವಾಗಿಬೇಕೆಂದರು. ಕಾರ್ಯಕ್ರಮದಲ್ಲಿ ಉಡುಪಿ ಅರಣ್ಯ ಉಪ ವಲಯಾಧಿಕಾರಿ ಗುರುರಾಜ್, ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ, ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಸುಷ್ಮಾ ಟಿ, ಡಾ. ಮಹೇಶ್ ಕುಮಾರ್ ಕೆ.ಇ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ ಹಾಗೂ ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಎಲ್ಲಾ ಬೋಧಕ/ಬೋಧಕೇತರ ವೃಂದದವರು ಭಾಗಿಯಾದರು.
ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕ ಪ್ರಶಾಂತ್ ಎನ್. ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಜನೋಪಯೋಗಿ ಸಸಿಗಳನ್ನು ವಿತರಿಸಲಾಯಿತು. ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.