Sunday, September 27, 2026
Sunday, September 27, 2026

ಪಶ್ಚಿಮ ಘಟ್ಟಗಳ ರಕ್ಷಣೆಗೆ ಕಟಿಬದ್ಧರಾಗಿ: ಟಿ.ಎನ್.ಸೀತಾರಾಮ್

ಪಶ್ಚಿಮ ಘಟ್ಟಗಳ ರಕ್ಷಣೆಗೆ ಕಟಿಬದ್ಧರಾಗಿ: ಟಿ.ಎನ್.ಸೀತಾರಾಮ್

Date:

ಉಡುಪಿ, ಜ.26: ಪ್ರಪಂಚದಾದ್ಯಂತ ಪ್ರತಿ ನಿಮಿಷಕ್ಕೂ ಆಮ್ಲಜನಕ ಕಡಿಮೆಯಾಗುತ್ತಿದೆ. ಹಸಿರು ಸಾಯುವಂತಹ ಪರಿಸ್ಥಿತಿ ಇಂದು ಎದುರಾಗಿದೆ. ಇಂದು ಪಶ್ಚಿಮ ಘಟ್ಟಗಳಿಗೂ ಅಪಾಯ ಎದುರಾಗಿದ್ದು ನಾವು ಎಚ್ಚೆತ್ತುಕೊಳ್ಳಬೇಕಿದೆ ಎಂದು ಕಿರುತೆರೆ ನಿರ್ದೇಶಕ ಟಿ. ಎನ್. ಸೀತಾರಾಮ್ ಅಭಿಪ್ರಾಯಪಟ್ಟರು.

ಸಂಸ್ಕ್ರತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಭಾನುವಾರ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದಲ್ಲಿ, ಪಂಚಮಿ ಟ್ರಸ್ಟ್ ಕೊಡಮಾಡುವ ಪಂಚಮಿ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಸ್ತುತ ಎಐ ಹೇಳಿದಂತೆ ಜಗತ್ತು ನಡೆಯುವಂತಾಗಿದ್ದು, ಈಗಾಗಲೇ ಇದರಿಂದಾಗಿ ಹಲವಾರು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಮಕ್ಕಳ ಸೃಷ್ಟಿಶೀಲ ಮನಸ್ಸನ್ನು ಇದು ಭಸ್ಮ ಮಾಡುವ ಕೆಲಸ ಮಾಡುತ್ತಿದೆ. ಸಂಸ್ಕೃತಿ, ಸಂಸ್ಕಾರಕ್ಕೆ ಎಐ ಕಾಲಿಟ್ಟರೆ ಅದರಿಂದ ಬಹುದೊಡ್ಡ ನಷ್ಟ ಉಂಟಾಗಲಿದೆ ಎಂದರು. ಎಐ ಎಂಬುದು ಹೃದಯದ ಕಣ್ಣೀರು ಅರ್ಥ ಮಾಡುವುದಿಲ್ಲ. ಇದರಿಂದಾಗಿ ಉಂಟಾದ ನಿರುದ್ಯೋಗಿಗಳ ಸಂಖ್ಯೆ ಕೋಟಿ ದಾಟಬಹುದು ಎಂದು ಅವರು ತಿಳಿಸಿದರು. ಉಡುಪಿ ಭಾಗದ ಗೋಪಾಲಕೃಷ್ಣ ಅಡಿಗ, ಬಿ. ಶಿವರಾಮ ಕಾರಂತರು ನನ್ನ ಮೇಲೆ ಪ್ರಭಾವ ಬೀರಿದ್ದಾರೆ ಎಂದರು.

ಈ ವೇಳೆ ಹಿರಿಯ ವಿದ್ವಾಂಸ ನಾಡೋಜ ಪ್ರೊ. ಕೆ.ಪಿ.ರಾವ್, ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ್, ಪಂಚಮಿ ಟ್ರಸ್ಟ್ ಸಂಸ್ಥಾಪಕ ಡಾ. ಎಂ.ಹರೀಶ್ಚಂದ್ರ, ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ಮಣಿಪಾಲದ ಶಂಕರ್ ರೂಫಿಂಗ್ ಸಿಸ್ಟಮ್ ವ್ಯವಸ್ಥಾಪಕಿ ಸುಗುಣಾ ಸುವರ್ಣ, ಕಲಾಪೋಷಕ ಭುವನ ಪ್ರಸಾದ್ ಹೆಗ್ಡೆ, ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್ ಉಪಸ್ಥಿತರಿದ್ದರು. ವಿದ್ಯಾ ಶ್ಯಾಮಸುಂದರ್ ಸಮ್ಮಾನ ಪತ್ರ ವಾಚಿಸಿದರು. ರವಿರಾಜ್ ಎಚ್.ಪಿ. ಪ್ರಸ್ತಾವನೆಗೈದರು. ಆಸ್ಟ್ರೋ ಮೋಹನ್ ಸ್ವಾಗತಿಸಿ, ಜನಾರ್ದನ ಕೊಡವೂರು ವಂದಿಸಿದರು. ಪೂರ್ಣಿಮಾ ಜನಾರ್ದನ ಕೊಡವೂರು ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!