ಕಾಪು, ಜ.26: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು.
ದೇವಳದ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ ಸಾಲ್ಯಾನ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.




By
ForthFocus™