Thursday, March 26, 2026
Thursday, March 26, 2026

ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

Date:

ಉಡುಪಿ, ಜ.26: ನಗರದ ದೊಡ್ಡಣಗುಡ್ಡೆ ಪುಷ್ಟ ಹರಾಜು ಕೇಂದ್ರದ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಧಾರಿತ ತೋಟಗಾರಿಕೆ ಫಲಪುಷ್ಪ ಪ್ರದರ್ಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಉದ್ಘಾಟನೆಯನ್ನು ನೆರವೇರಿಸಿ ಮೂರು ದಿನದ ಫಲಪುಷ್ಪ ಪ್ರದರ್ಶನಕ್ಕೆ ಶುಭ ಹಾರೈಸಿದರು.

ಸಾಲುಮರದ ತಿಮ್ಮಕ್ಕನ ಕಲಾಕೃತಿಯನ್ನು ಮೈಸೂರಿನ ಕಲೆಗಾರರು ಮಾಡಿದ್ದು ತಿಮ್ಮಕ್ಕನ ಜೀವನದ ವಿಷಯಗಳನ್ನು ಹೇಳುತ್ತಾ ಮುಂದೆ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ತಿಮ್ಮಕ್ಕನ ಕಲಾಕೃತಿಗಳು ಬಂದಿರುವ ಜನರನ್ನು ಹುಬ್ಬೇರಿಸುವಂತೆ ಮಾಡಿರುತ್ತದೆ. ಅಪ್ರದಾನ ಹಣ್ಣುಗಳ ಪ್ರದರ್ಶನ, ರೈತರು ತಂದ ಪ್ರದರ್ಶಿಕೆಗಳು, ಜಾನೂರ್ ಕಲಾ ರಚನೆ, ಡೋರೆಮಾನ್, ಜೇಂಕಾರ ಹೀಗೆ ಹಲವಾರು ಪ್ರದರ್ಶಿಕೆಗಳು ಜನರನ್ನು ಕೈಬಿಸಿ ಕರೆಯುತ್ತಿದೆ. ಸ್ಥಳೀಯವಾಗಿ ಗೊಂಡೆ ಹೂ ಗಳನ್ನ ಉತ್ಪಾದಿಸಿ, ಪೆಟೂನಿಯ, ಇಂಫೆಸಿಯ, ಡಯಾಂಥಸ್, ಕಳಂಚೊ, ಮುಂತಾದ ಸಾವಿರಾರು ಆಕರ್ಷಕ ಹೂವಿನ ಕುಂಡಗಳ ಜೋಡಣೆ ಮಾಡಲಾಗಿದ್ದು, 50ಕ್ಕೂ ಹೆಚ್ಚಿನ ಮಳಿಗೆಗಳನ್ನು ತೆರೆಯಲಾಗಿದ್ದು ಮೂರು ದಿನಗಳು ವಿಶೇಷವಾಗಿ ಸಾರ್ವಜನಿಕರಿಗೆ ಪ್ರದರ್ಶನದ ಸೊಬಗನ್ನು ನೋಡಲು ಅವಕಾಶ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ.ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಮಕ್ಕಳು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಾದ್ಯಂತ ಇಂಧನ ಕೊರತೆ ಇಲ್ಲ: ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ

ನವದೆಹಲಿ, ಮಾ.25: ದೇಶಾದ್ಯಂತ ಇಂಧನ ಕೊರತೆ ಇಲ್ಲ ಎಂದು ಭಾರತ್ ಪೆಟ್ರೋಲಿಯಂ...

ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ: ಸರ್ಕಾರ

ನವದೆಹಲಿ, ಮಾ.25: ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ...

ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ಮನು ಪಟೇಲ್ ಬಿ.ವೈ

ಉಡುಪಿ, ಮಾ.25: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ...

ಏರ್ಲಪಾಡಿ: ಗಾಳಿ ಮಳೆಗೆ ಮನೆಯ ಮೇಲೆ ಮರ ಬಿದ್ದು ಹಾನಿ

ಉಡುಪಿ, ಮಾ.25: ಮಂಗಳವಾರ ಜಿಲ್ಲೆಯ ಕೆಲವೆಡೆ ಸುರಿದ ಗಾಳಿ ಮಳೆಗೆ ಅಲ್ಲಲ್ಲಿ...
error: Content is protected !!