Thursday, March 26, 2026
Thursday, March 26, 2026

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Date:

ಉಡುಪಿ, ಜ.27: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿಯಲ್ಲಿ ಇಂದು ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್.ಹೆಚ್ ಉದ್ಘಾಟಿಸಿ, ದೇಶದಲ್ಲಿರುವ ಲಿಂಗ ತಾರತಮ್ಯ, ಹೆಣ್ಣು ಮಕ್ಕಳ ಶಿಕ್ಷಣದ ಅರಿವು, ಹೆಣ್ಣು ಮಕ್ಕಳನ್ನು ಉಳಿಸಿ ಬೆಳೆಸಿ ಪೋ಼ಷಿಸುವ ಬಗ್ಗೆ ಮಾಹಿತಿ ನೀಡಿದರು. ಪ್ರಸೂತಿ ತಜ್ಞೆ ಡಾ.ಕವಿತಾ ಮತ್ತು ಮಕ್ಕಳ ತಜ್ಞ ಡಾ.ಅಮರನಾಥ್ ಶಾಸ್ತ್ರಿ ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಮಾತನಾಡಿದರು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್, ಪ್ರಸೂತಿ ತಜ್ಞೆ ಡಾ.ಐಶ್ವರ್ಯ, ಶುಶ್ರೂಷಕಧೀಕ್ಷಕಿ ಪ್ಲೋರಾ ಡಿ’ಆಲ್ಮೇಡ, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಬಾಣಂತಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಇತ್ತೀಚೆಗೆ ಜನಿಸಿದ ಮೂರು ನವಜಾತ ಶಿಶುಗಳಿಗೆ ಕಿಟ್‌ನ್ನು ವಿತರಿಸಲಾಯಿತು. ಆಪ್ತಸಮಾಲೋಚಕಿ ವಿದ್ಯಾ ಸುವರ್ಣ ನಿರೂಪಿಸಿ, ಶುಶ್ರೂಷಕಾಧಿಕಾರಿ ರೇಣುಕ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನ ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಂಡರೆ ಮಾತ್ರ ಸಂದರ್ಶನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ. ಗಣೇಶ್ ಪ್ರಸಾದ್ ಜಿ. ನಾಯಕ್

ಬಸ್ರೂರು, ಮಾ.26: ಸಂವಹನ ಕೌಶಲ್ಯಗಳನ್ನು ಚಿಕ್ಕ ವಯಸ್ಸಿನಿಂದಲೇ ಮೈಗೂಡಿಸಿಕೊಂಡರೆ ವಿದ್ಯಾರ್ಥಿ ಜೀವನದಲ್ಲಿ...

ದೇಶಾದ್ಯಂತ ಇಂಧನ ಕೊರತೆ ಇಲ್ಲ: ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ

ನವದೆಹಲಿ, ಮಾ.25: ದೇಶಾದ್ಯಂತ ಇಂಧನ ಕೊರತೆ ಇಲ್ಲ ಎಂದು ಭಾರತ್ ಪೆಟ್ರೋಲಿಯಂ...

ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ: ಸರ್ಕಾರ

ನವದೆಹಲಿ, ಮಾ.25: ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ...

ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ಮನು ಪಟೇಲ್ ಬಿ.ವೈ

ಉಡುಪಿ, ಮಾ.25: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ...
error: Content is protected !!