Sunday, February 8, 2026
Sunday, February 8, 2026

ಅಂಚೆ ಇಲಾಖೆ: ವಿದ್ಯಾರ್ಥಿಗಳಿಗೆ ಪತ್ರ ಲೇಖನ ಸ್ಪರ್ಧೆ; ಪ್ರಥಮ ಬಹುಮಾನ ರೂ. 50 ಸಾವಿರ

ಅಂಚೆ ಇಲಾಖೆ: ವಿದ್ಯಾರ್ಥಿಗಳಿಗೆ ಪತ್ರ ಲೇಖನ ಸ್ಪರ್ಧೆ; ಪ್ರಥಮ ಬಹುಮಾನ ರೂ. 50 ಸಾವಿರ

Date:

ಉಡುಪಿ, ಜ.29: ಅಂಚೆ ಇಲಾಖೆಯು ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಪಿಟೇಷನ್ ಪ್ರಯುಕ್ತ 9 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ “Write a letter to a friend about why human connection matters in a digital world” ಎಂಬ ವಿಷಯದ ಕುರಿತು ಪತ್ರ ಲೇಖನ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಸ್ಪರ್ಧಾಳುಗಳು ಪತ್ರ ಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈ ಬರಹದಲ್ಲಿ ನಿಗದಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ತಮ್ಮ ಶಾಲೆಯ ಮುಖಾಂತರ ಫೆಬ್ರವರಿ 14 ರ ಒಳಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಅತ್ಯುತ್ತಮ ಮೂರು ಪತ್ರಲೇಖನಗಳಿಗೆ ಬಹುಮಾನಗಳನ್ನು ದೇಶೀಯ ಮಟ್ಟದಲ್ಲಿ ಕ್ರಮವಾಗಿ 50,000, 25,000, 10,000 ಮತ್ತು ಕರ್ನಾಟಕ ವೃತ್ತ ಮಟ್ಟದಲ್ಲಿ 25,000, 10,000 ಮತ್ತು 5,000 ರೂ. ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ದೂ.ಸಂಖ್ಯೆ: 0820-2526144, 2520471 ಹಾಗೂ 2521780 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಅಧೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!