ಉಡುಪಿ, ಜ.29: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಸ್ತವ್ಯ ಹಾಗೂ ವಾಣಿಜ್ಯ ನೀರಿನ ಬಳಕೆದಾರರು ನಳ್ಳಿ ನೀರಿನ ಜೋಡಣೆ ಬಾಬ್ತು, ಪ್ರತೀ ತಿಂಗಳ ನೀರಿನ ಶುಲ್ಕಗಳನ್ನು ನಿಗಧಿತ ಅವಧಿಯೊಳಗೆ ಪಾವತಿಸಬೇಕು. ಬಾಕಿ ಇರುವ ನಳ್ಳಿ ನೀರಿನ ಶುಲ್ಕವನ್ನು ಫೆಬ್ರವರಿ 15 ರ ಒಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ನಳ್ಳಿ ನೀರಿನ ಜೋಡಣೆಯನ್ನು ರದ್ದುಗೊಳಿಸಲು ಕ್ರಮ ವಹಿಸಲಾಗುವುದು. ಸಾರ್ವಜನಿಕರು ಇದಕ್ಕೆ ಅವಕಾಶ ನೀಡದೇ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ನಿಗದಿತ ಅವಧಿಯೊಳಗೆ ನಳ್ಳಿ ನೀರಿನ ಶುಲ್ಕ ಪಾವತಿಗೆ ಸೂಚನೆ
ನಿಗದಿತ ಅವಧಿಯೊಳಗೆ ನಳ್ಳಿ ನೀರಿನ ಶುಲ್ಕ ಪಾವತಿಗೆ ಸೂಚನೆ
Date:




By
ForthFocus™