Saturday, February 7, 2026
Saturday, February 7, 2026

‘ಅವಳ ನಿಟ್ಟುಸಿರು’ ಬಿಡುಗಡೆ

‘ಅವಳ ನಿಟ್ಟುಸಿರು’ ಬಿಡುಗಡೆ

Date:

ಗಂಗೊಳ್ಳಿ, ಫೆ.1: ಓದು ವ್ಯಸನವಾಗಬೇಕು, ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ. ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪಡೆಯುಪರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಎಸ್‌. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ ನಡೆದ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ಅಂಕಣ ಬರಹಗಳ ಸಂಕಲನ ‘ಅವಳ ನಿಟ್ಟುಸಿರು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೃತಿಯನ್ನು ಅನಾವರಣಗೊಳಿಸಿ ಮಾತನಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಪ್ರಯೋಗಾಲಯ ಸಹಾಯಕರಾದ ವಿಜಯಕುಮಾರ್ ಎನ್ ಮಾತನಾಡಿ, ಸೃಜನಶೀಲ ಸಾಹಿತ್ಯ ಇಂದಿನ ಅಗತ್ಯ. ಉತ್ತಮ ವಿಚಾರಗಳ ಓದು ನಮ್ಮ ವ್ಯಕ್ತಿತ್ವವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುತ್ತದೆ. ಅವಳ ನಿಟ್ಟುಸಿರು ಕೃತಿ ಈ ನಿಟ್ಟಿನಲ್ಲಿ ಉತ್ತಮ ಕೊಡುಗೆ ಎಂದು ಹೇಳಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಪ್ರತಿನಿಧಿ ಆದಿತ್ಯ ಎಸ್ ಪೂಜಾರಿ ಸ್ವಾಗತಿಸಿದರು. ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಭಿಜ್ಞಾ ಖಾರ್ವಿ ನಿರೂಪಿಸಿದರು. ಆಯಿಷಾ ನಿಫಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...
error: Content is protected !!