Wednesday, July 29, 2026
Wednesday, July 29, 2026

ಫೆಬ್ರವರಿ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸಮಾವೇಶ: ಅಶೋಕ್ ಕುಮಾರ್ ಕೊಡವೂರು

ಫೆಬ್ರವರಿ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸಮಾವೇಶ: ಅಶೋಕ್ ಕುಮಾರ್ ಕೊಡವೂರು

Date:

ಉಡುಪಿ, ಫೆ.1: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪಕ ಪ್ರಚಾರಕ್ಕಾಗಿ ಹಾಗೂ ತಳಮಟ್ಟದಲ್ಲಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ತಾಲೂಕು ಮಟ್ಟದ ಸಮಾವೇಶವನ್ನು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು, ಗ್ಯಾರಂಟಿ ಯೋಜನೆಯ ಲಾಭ ಪ್ರತಿ ಫಲಾನುಭವಿ ಪಡೆಯುವಂತಾಗಲು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆಬ್ರವರಿ ಮಾಹೆಯಲ್ಲಿ ತಾಲೂಕು ಮಟ್ಟದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಪಂಚ ಗ್ಯಾರಂಟಿ ಯೋಜನೆಗಳ ಡಿಸೆಂಬರ್ 2025 ರ ವರೆಗಿನ ಪ್ರಗತಿ ಪರಿಶೀಲಿಸಿ ಮಾತನಾಡಿ, ಶಕ್ತಿ ಯೋಜನೆಯಡಿ ಜಿಲ್ಲೆಯ ಉಡುಪಿ- ಕುಂದಾಪುರ ಘಟಕಗಳಿಂದ ಕಾರ್ಯಾಚರಣೆಯಾಗುವ ಸಾರಿಗೆಗಳಲ್ಲಿ ಈವರೆಗೆ ಒಟ್ಟು 3.53 ಕೋಟಿ ಮಹಿಳಾ ಪ್ರಯಾಣಿಕರು ಯೋಜನೆಯ ಸೌಲಭ್ಯ ಪಡೆದಿದ್ದು, ಒಟ್ಟು 137.59 ಕೋಟಿ ರೂ. ಮೊತ್ತದ ವೆಚ್ಚ ಭರಿಸಲಾಗಿರುತ್ತದೆ ಎಂದರು. ಗ್ರಾಮೀಣ ಪ್ರದೇಶದ ಜನರ ಬೇಡಿಕೆಯಂತೆ ಗೋಳಿಯಂಗಡಿ-ವಡ್ಡರ್ಸೆ-ಕುಂದಾಪುರ ಮಾರ್ಗ, ಕೊರೋನಾ ಅವಧಿಯಲ್ಲಿ ಸ್ಥಗಿತಗೊಂಡಿದ್ದ ಕೋಡಿಬೆಂಗ್ರೆ ಸಾರಿಗೆ, ಉಡುಪಿ-ಬ್ರಹ್ಮಾವರ-ಹೆಬ್ರಿ, ಪೆರ್ಣಂಕಿಲ, ಕುಂದಾಪುರ-ತಲ್ಲೂರು-ಮಾವಿನಕಟ್ಟೆ-ನೇರಳಕಟ್ಟೆ ಮಾರ್ಗ, ಬೈಂದೂರು-ಪಡುವರಿ-ಸೋಮೇಶ್ವರ-ದೊಂಬೆ-ಕರಾವಳಿ-ಶಿರೂರು ಮಾರ್ಗ, ನಾಡಾ-ಬಡಾಕೆರೆ ಮಾರ್ಗದ ಬಸ್ಸುಗಳು ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಸತತ ಅನುಸರಣೆಯಿಂದ ಕಾರ್ಯಾರಂಭ ಗೊಂಡಿರುವುದಾಗಿ ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಯೋಜನೆಯ ಪ್ರಾರಂಭದಲ್ಲಿ 1,99,285 ಮಹಿಳಾ ಫಲಾನುಭವಿಗಳಿದ್ದು, ಸೆಪ್ಟೆಂಬರ್ 2025ರ ಅಂತ್ಯದವರೆಗೆ 2,24,636 ಕ್ಕೆ ಮಹಿಳಾ ಫಲಾನುಭವಿಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೂ ರೂ.1050.90 ಕೋಟಿ ಗೃಹಲಕ್ಷ್ಮಿ ಅನುದಾನ ಪಾವತಿಸಲಾಗಿರುತ್ತದೆ. ಈ ಯೋಜನೆಯಡಿ ಇದುವರೆಗೆ 2,36,995 ಮಹಿಳೆಯರು ನೊಂದಾಯಿಸಿದ್ದು, 2,24,636 ಫಲಾನುಭವಿಗಳು ಯೋಜನೆಯ ಸೌಲಭ್ಯವನ್ನು ಪಡೆದಿರುತ್ತಾರೆ ಎಂದರು. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 3,80,040 ಬಳಕೆದಾರರಲ್ಲಿ 3,00,642 ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದಿರುತ್ತಾರೆ. ಡಿಸೆಂಬರ್ ಅಂತ್ಯದವರೆಗೆ ರೂ.591.07 ಕೋಟಿ ರಿಯಾಯಿತಿ ಮೊತ್ತವನ್ನು ಗೃಹಬಳಕೆ ಸ್ಥಾವರಗಳಿಗೆ ನೀಡಲಾಗಿರುತ್ತದೆ. ಅನ್ನಭಾಗ್ಯ ಯೋಜನೆಯಡಿ ಜನವರಿ 2026 ರ ಅಂತ್ಯದವರೆಗೆ ಒಟ್ಟು 1,87,576 ಪಡಿತರ ಚೀಟಿದಾರರಿಗೆ 39771.40 ಕ್ವಿಂಟಾಲ್ ಅಕ್ಕಿ ಹಂಚಿಕೆ ಮಾಡಲಾಗಿರುತ್ತದೆ ಎಂದರು.

ಯುವನಿಧಿ ಯೋಜನೆಯಡಿ ಡಿಸೆಂಬರ್ ವರೆಗೆ 4274 ವಿದ್ಯಾರ್ಥಿಗಳು ನೊಂದಣಿಮಾಡಿಕೊಂಡಿದ್ದು, 3350 ಫಲಾನುಭವಿಗಳು ಯೋಜನೆಯ ಲಾಭ ಪಡೆದಿರುತ್ತಾರೆ. ಒಟ್ಟು 8.54 ಕೋಟಿ ರೂ. ಡಿಬಿಟಿ ಮೂಲಕ ಅರ್ಹ ವಿದ್ಯಾರ್ಥಿಗಳ ಖಾತೆಗೆ ಹಣ ವರ್ಗಾವಣೆಯಾಗಿರುತ್ತದೆ ಎಂದ ಅವರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು ಇಲಾಖಾಧಿಕಾರಿಗಳೊಂದಿಗೆ ವಿವಿಧ ಶೈಕ್ಷಣಿಕ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿ ಶಿಬಿರಗಳನ್ನು ಏರ್ಪಡಿಸುವುದರೊಂದಿಗೆ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ ಯೋಜನೆಯ ಬಗ್ಗೆ ಮಾಹಿತಿ ನೀಡಲಾಗಿರುತ್ತದೆ ಎಂದರು.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಗುಂಪುಗಳನ್ನು ರಚಿಸಿ ಸರ್ಕಾರದ ವಿವಿಧ ಯೋಜನೆಗಳೊಂದಿಗೆ ಒಗ್ಗೂಡಿಸಿಕೊಂಡು ವಿವಿಧ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಕುರಿತು ಆದಷ್ಟು ಶೀಘ್ರದಲ್ಲಿ ಗುಂಪುಗಳನ್ನು ರಚನೆ ಮಾಡುವಂತೆ ಸಮಿತಿಯ ಸದಸ್ಯರುಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರುಗಳು, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!