Thursday, March 26, 2026
Thursday, March 26, 2026

ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಮನ್ಮಹಾರಥೋತ್ಸವ

ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಮನ್ಮಹಾರಥೋತ್ಸವ

Date:

ಉಡುಪಿ, ಫೆ.1: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ 2026 ನೇ ಸಾಲಿನ ವಾರ್ಷಿಕ ಮಹೋತ್ಸವವು ಫೆಬ್ರವರಿ 10 ರಿಂದ 16 ರ ವರೆಗೆ ನಡೆಯಲಿದೆ. ಫೆ. 10 ರಂದು ಬೆಳಗ್ಗೆ 9 ರಿಂದ ಬಾರಾಳಿ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಗಣಹೋಮ, ಫೆ. 11 ಹಾಗೂ 12 ರಂದು ವಿಶೇಷ ಪೂಜೆ ಹಾಗೂ ರಂಗಪೂಜೆಗಳು, ಫೆ. 13 ರ ರಾತ್ರಿ 9 ರಿಂದ ಕೆಂಡಸೇವೆ, ಫೆ. 14 ರಂದು ಮಧ್ಯಾಹ್ನ 12.30 ರಿಂದ ಶ್ರೀ ಮನ್ಮಹಾರಥೋತ್ಸವ ಹಾಗೂ ಫೆ. 15 ರಂದು ರಾತ್ರಿ ದೀಪೋತ್ಸವ, ಪಾಲಕಿ ಉತ್ಸವ ಹಾಗೂ ಅಷ್ಟಾವಧಾನ ಸೇವೆಗಳ ನಂತ ಐದೂ ಮೇಳಗಳಿಂದ ಸೇವೆ ಆಟ ಜರುಗಲಿದೆ ಎಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾಣಪುರ: ಶ್ರೀ ಸುಧೀಂದ್ರ ಮಂಟಪ

ಕಲ್ಯಾಣಪುರ, ಮಾ.26: ಕಾಶೀ ಮಠಾಧೀಶರಾಗಿದ್ದ ಶ್ರೀ ಸುಧೀಂದ್ರತೀರ್ಥ ಶ್ರೀಪಾದಂಗಳವರ ಜನ್ಮ ಶತಮಾನೋತ್ಸವದ...

ಅಜ್ಜರಕಾಡು: ಬಡ ರೋಗಿಗಳಿಗೆ ಆಹಾರ ಪಧಾರ್ಥಗಳ ಕಿಟ್ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಉಡುಪಿ, ಮಾ.26: ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಎಂ.ಸಿ.ಕೆ.ಎಸ್ ಫುಡ್...

ಕುಂದಾಪುರದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ

ಉಡುಪಿ, ಮಾ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ...
error: Content is protected !!