Friday, September 4, 2026
Friday, September 4, 2026

ಫೆ.5: ನಿಟ್ಟೆಯಲ್ಲಿ ಸಿಇಟಿಇ 2026 ಸಮ್ಮೇಳನ ಉದ್ಘಾಟನೆ

ಫೆ.5: ನಿಟ್ಟೆಯಲ್ಲಿ ಸಿಇಟಿಇ 2026 ಸಮ್ಮೇಳನ ಉದ್ಘಾಟನೆ

Date:

ಕಾರ್ಕಳ, ಫೆ.1: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್–ಕ್ಯಾಂಪಸ್ ಕೇಂದ್ರದ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ‘ಐಸಿಇಟಿಇ–2026 ಬಹುಸಮ್ಮೇಳನ’ವನ್ನು ಫೆಬ್ರವರಿ 5 ರಿಂದ 7 ರವರೆಗೆ ನಿಟ್ಟೆ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಈ ಬಹುಸಮ್ಮೇಳನದ ಉದ್ಘಾಟಕರಾಗಿ ‘ಸಿಎಸ್ಐಆರ್ – ರಾಷ್ಟ್ರೀಯ ಓಶನೋಗ್ರಾಫಿ ಸಂಸ್ಥೆ’ (ಎನ್‌ಐಒ), ಗೋವಾದ ನಿರ್ದೇಶಕ ಡಾ. ಸುನಿಲ್ ಕುಮಾರ್ ಸಿಂಗ್ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ್ ಮುಗೇರಾಯ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಜಪಾನ್‌ನ ರಿತ್ಸುಮೇಕಾನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಉಪಡೀನ್ ಪ್ರೊ. ಯಸುಹಿರೋ ಶಿಯೋಮಿ, ದಕ್ಷಿಣ ಕೊರಿಯಾದ ಕುನ್ಸಾನ್ ರಾಷ್ಟ್ರೀಯ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಕಂಪ್ಯೂಟರ್ & ಸಾಫ್ಟ್ವೇರ್ ನ ಪ್ರಾಧ್ಯಾಪಕ ಡಾ. ಇನ್ ಹೋ ರಾ, ಈಜಿಪ್ಟ್‌ನ ಅಲ್–ಅಝರ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಹೆಶಂ ನಬೀಲ್, ಮಲೇಷಿಯಾದ ಯುನಿವರ್ಸಿಟಿ ಟೆಕ್ನೋಲೋಜಿ ಮಲೇಷಿಯಾದ ಸಹಪ್ರಾಧ್ಯಾಪಕ ಡಾ. ಮೊಹಮ್ಮದ್ ಇಬ್ರಾಹಿಂ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಐಸಿಇಟಿಇ–2026 ಬಹುಸಮ್ಮೇಳನವು ನಿಟ್ಟೆ–ಬಯೋ 2026, ಸಿಟಿಸಿಎಸ್ 2026, ಎಐಡಿಇ 2026, ಅರೀವ್ 2026, ವಿಸ್ಪೈಸ್ 2026, ಎಸ್‌ಎಂಇ 2026 ಮತ್ತು ಎಂಎಸ್‌ಎಂಎಟಿ 2026 ಎಂಬ ಏಳು ಅಂತಾರಾಷ್ಟ್ರೀಯ ಸಮ್ಮೇಳನಗಳನ್ನು ಒಳಗೊಂಡಿದೆ. ಈ ಸಮ್ಮೇಳನದಲ್ಲಿ ಭಾರತ ಹಾಗೂ ವಿದೇಶಗಳಾದ ಜಪಾನ್, ದಕ್ಷಿಣ ಕೊರಿಯಾ, ಈಜಿಪ್ಟ್, ಮಲೇಷಿಯಾ ಮೊದಲಾದ ದೇಶಗಳಿಂದ ಗಣ್ಯ ವಿದ್ವಾಂಸರು ಮತ್ತು ಸಂಶೋಧಕರು ತಮ್ಮ ಪರಿಣಿತ ಕ್ಷೇತ್ರಗಳಲ್ಲಿ ಉಪನ್ಯಾಸ ನೀಡಲಿದ್ದಾರೆ. ‘ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಂಶೋಧನಾ ಲೇಖನಗಳನ್ನು ಮಂಡಿಸಲಿದ್ದಾರೆ. ಕೃತಕ ಬುದ್ಧಿಮತ್ತೆ, ಎಂಜಿನಿಯರಿಂಗ್, ವಿಜ್ಞಾನ, ಗಣಿತ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಇತ್ತೀಚಿನ ಸಂಶೋಧನಾ ಟ್ರೆಂಡ್ ಗಳ ಕುರಿತು ಆಳವಾದ ಚರ್ಚೆ ನಡೆಯಲಿದೆ’ ಎಂದು ಸಂಸ್ಥೆಯ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!