Saturday, September 26, 2026
Saturday, September 26, 2026

ಬಜೆಟ್ ನಲ್ಲಿ ಕರಾವಳಿಗೆ ಮೋಸ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್

ಬಜೆಟ್ ನಲ್ಲಿ ಕರಾವಳಿಗೆ ಮೋಸ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್

Date:

ಉಡುಪಿ, ಫೆ.1: ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಪ್ರಕಟಿಸದೆ ಮತ್ತೊಮ್ಮೆ ಚೊಂಬು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ.

ಕರಾವಳಿಯ ಮೀನುಗಾರಿಕೆ, ಪ್ರವಾಸೋದ್ಯಮ ಅಭಿವೃದ್ದಿ, ಬಂದರುಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಭಾರೀ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿತ್ತು. ಆದರೆ ಅಂತಹ ಯಾವುದೇ ರೀತಿಯ ನಿರ್ದಿಷ್ಟ ಯೋಜನೆಗಳನ್ನು ವಿತ್ತ ಸಚಿವರು ಕರಾವಳಿ ಜಿಲ್ಲೆಗಳಿಗೆ ನೀಡದೆ ಮತ್ತೊಮ್ಮೆ ಮೋಸ ಮಾಡಿದ್ದಾರೆ.

ದೊಡ್ಡ ಉದ್ಯಮಿಪತಿಗಳಿಗೆ ಈ ಬಾರಿಯ ಬಜೆಟ್ ಲಾಭದಾಯಕವಾಗಿದೆ ಹೊರತು ಮಧ್ಯಮ ವರ್ಗದವರ ಜೀವನ ಸುಧಾರಣೆಯ ನಿಟ್ಟಿನಲ್ಲಿ ಯಾವುದೇ ರೀತಿಯ ಘೋಷಣೆಗಳನ್ನು ಮಾಡಿಲ್ಲ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ರಾಜ್ಯದ ಅಭಿವೃದ್ದಿಯ ನಿಟ್ಟಿನಲ್ಲಿ ತಮ್ಮ ಬಜೆಟ್‌ನಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ಕೃಷಿಕರಿಗೆ ಬೆಂಬಲವಾಗುವ ನಿಟ್ಟಿನಲ್ಲಿ ಪಿಎಂ ಕಿಸಾನ್ ಯೋಜನೆ ಮೊತ್ತವನ್ನು ಏರಿಕೆ ಮಾಡಬಹುದು ಎಂದು ಕೊಂಡಿದ್ದ ನಿರೀಕ್ಷೆ ಕೂಡ ಹುಸಿಯಾಗಿದೆ. ಕೃಷಿಕ ವರ್ಗದ ಕಲ್ಯಾಣದ ನಿಟ್ಟಿನಲ್ಲಿ ಯಾವುದೇ ಹೊಸ ಯೋಜನೆಗಳನ್ನು ಕೇಂದ್ರ ಸರಕಾರ ಘೋಷಣೆ ಮಾಡದಿರುವುದು ರೈತ ವರ್ಗಕ್ಕೆ ಮಾಡಿರುವ ಅನ್ಯಾಯವಾಗಿದೆ.

ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ಮತ್ತು ಕೇರಳ ರಾಜ್ಯಗಳಿಗೆ ಕೇಂದ್ರ ಬಜೆಟ್‌ನಲ್ಲಿ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿರುವುದು ಬಿಟ್ಟರೆ ಕರ್ನಾಟಕ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳ ಘೋಷಣೆ ಮಾಡಿಲ್ಲ. ಬೇರೆ ರಾಜ್ಯಗಳಿಗೆ ರೈಲು ಯೋಜನೆಯಲ್ಲಿ ಅವಕಾಶ ನೀಡಿದ್ದು ಕರಾವಳಿಯ ರೈಲು ಹಳಿ ಅಭಿವೃದದ್ದಿಯ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಿದ್ದು ಇದೊಂದು ನಿರಾಶದಾಯಕ ಬಜೆಟ್ ಆಗಿದ್ದು ರಾಜ್ಯ ಸರಕಾರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!