Saturday, September 12, 2026
Saturday, September 12, 2026

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

Date:

ಉಡುಪಿ, ಫೆ.2: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಫೆಬ್ರವರಿ 6 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಾರ್ಕಳ ತಾಲೂಕು ಸರಕಾರಿ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!