Sunday, September 13, 2026
Sunday, September 13, 2026

ಕಸಾಪ ಉಡುಪಿ ತಾಲೂಕು ಘಟಕದ ಸಮಾಲೋಚನಾ ಸಭೆ

ಕಸಾಪ ಉಡುಪಿ ತಾಲೂಕು ಘಟಕದ ಸಮಾಲೋಚನಾ ಸಭೆ

Date:

ಉಡುಪಿ, ಫೆ.2: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏಪ್ರಿಲ್ ತಿಂಗಳಿನಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು. ಈ ಸಂಬಂಧ ಉಡುಪಿ ಮಥುರಾ ಕಂಫರ್ಟ್ ನಲ್ಲಿ ಉಡುಪಿ ತಾಲೂಕು ಘಟಕಾಧ್ಯಕ್ಷ ರವಿರಾಜ್ ಹೆಚ್ ಪಿ. ಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಸಮ್ಮೇಳನದ ಅಧ್ಯಕ್ಷತೆಗೆ ಸುಮಾರು 8 ಹೆಸರುಗಳು ಸಭೆಯಲ್ಲಿ ಬಂದಿದ್ದು ಮುಂದಿನ ವಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಲಾಯಿತು. ಉಡುಪಿ ತಾಲೂಕು ಈಗಿನ ಸಮಿತಿಯ ಅಧಿಕಾರದವಧಿಯಲ್ಲಿ ಇದು 4ನೇ ಸಮ್ಮೇಳನವಾಗಿದ್ದು, ಉಡುಪಿ ತಾಲೂಕಿನ 16ನೇ ಸಮ್ಮೇಳನ ಜರಗಲಿದೆ.

ಬಹಳ ಅದ್ದೂರಿಯಿಂದ ಸಮ್ಮೇಳನ ನಡೆಯಲಿದ್ದು ವಿವಿಧ ವಿಚಾರ ಗೋಷ್ಠಿಗಳು, ಪುಸ್ತಕಗಳ ಲೋಕಾರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಮುಂತಾದ ಹತ್ತು ಹಲವು ಕಾರ್ಯಕ್ರಮಗಳು ನಡೆಸಲು ನಿರ್ಣಯಿಸಲಾಯಿತು.

ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಆಸ್ಟ್ರೋ ಮೋಹನ್, ರಾಘವೇಂದ್ರ ಪ್ರಭು ಕರ್ವಾಲ್, ರಮಾನಂದ, ವಿದ್ಯಾ ಸರಸ್ವತಿ, ದೀಪಾ ಕರ್ಕಿ, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಸುಭೋದ್, ಉಮೇಶ್ ಆಚಾರ್ಯ ಉಪಸ್ಥಿತರಿದ್ದರು.

ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಸ್ವಾಗತಿಸಿದರು. ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್ ಪಿ ಪ್ರಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ರಂಜನಿ ವಸಂತ್ ನಿರೂಪಿಸಿದರು. ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!