Monday, September 7, 2026
Monday, September 7, 2026

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

Date:

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ ಚಪ್ಪರ ಮುಹೂರ್ತ ಶುಕ್ರವಾರ ಜರಗಿತು. ಶ್ರೀ ದೇಗುಲದ ನಾಗದೇವರಿಗೆ ಹಾಗೂ ಅಮೃತೇಶ್ವರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಾಗಮಂಡಲ ನಡೆಯಲಿರುವ ಕೋಟ ಗಾಂಧಿ ಮೈದಾನದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವನ್ನು ವೇ.ಮೂ ಮಧುಸೂದನ್ ಬಾಯರಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಚಪ್ಪರ ಕಾರ್ಯಕ್ಕೆ ಚಾಲನೆ ನೀಡಿದರು. ಶ್ಯಾಮಿಯಾನ ಮಾಲಿಕರಾದ ದೇವದಾಸ್ ಕಾಂಚನ್ ಹಾಗೂ ಮಂಡಲದ ಚಪ್ಪರ ನೇತೃತ್ವ ಪಡೆದ ಭರತ್ ಗಾಣಿಗ, ಅಶೋಕ್ ಪೂಜಾರಿ ಅರ್ಚಕರಲ್ಲಿ ಪ್ರಸಾದ ಸ್ವೀಕರಿಸಿ ಪಾಲ್ಗೊಂಡರು.

ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಸುಧಾ ಎ ಪೂಜಾರಿ, ಶಿವ ಪೂಜಾರಿ, ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ ಕಾಂಚನ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ಸುಶೀಲ ಸೋಮಶೇಖರ್, ಹೊನ್ನಾರಿ ಬೊಬ್ಬರ್ಯ ದೇಗುಲದ ಧರ್ಮದರ್ಶಿ ಮಹಾಬಲ ಹೇರ್ಳೆ, ಮಲ್ಯಾಡಿ ಶಿವರಾಮ ಶೆಟ್ಟಿ,ಗಣೇಶ್ ಆಚಾರ್, ದೇಗುಲದ ಅರ್ಚಕ ಅಶ್ವತ್ ಜೋಗಿ, ದೇವೇಂದ್ರ ಗಾಣಿಗ, ರಾಘವೇಂದ್ರ ಪೂಜಾರಿ, ಗಣೇಶ್ ಪೂಜಾರಿ, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ರವೀಂದ್ರ ಐತಾಳ್ ಪಾರಂಪಳ್ಳಿ, ಪ್ರತಾಪ್ ಶೆಟ್ಟಿ ಸಾಸ್ತಾನ, ನಾಗರಾಜ್ ಗಾಣಿಗ ಸಾಲಿಗ್ರಾಮ, ಶೇವಧಿ ನಾಗರಾಜ್ ಗಾಣಿಗ, ವೇಣುಗೋಪಾಲ ಶೆಟ್ಟಿ, ಮಹಾಬಲ ಆಚಾರ್, ಭುಜಂಗ ಗುರಿಕಾರ, ಕೃಷ್ಣ ಜೋಗಿ, ಗಣೇಶ್ ಭಂಡಾರಿ, ತಿಮ್ಮ ಕಾಂಚನ್, ಒಳಮಾಡು ಸೋಮ ಮರಕಾಲ, ಸುಧಾಕರ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!