Monday, September 7, 2026
Monday, September 7, 2026

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

Date:

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ತೆಂಕನಿಡಿಯೂರು ಗ್ರಾಮದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಬೈಲಕರೆ ನಾಗಬನ ಬಳಿ ರಸ್ತೆ ಅಭಿವೃದ್ಧಿಗೆ 20 ಲಕ್ಷ, ಕೆಳಾರ್ಕಳಬೆಟ್ಟು ಭೋಜರಾಜ ಕಾಂಪೌಂಡ್ ಕೊಜಕುಳಿ ಒಳರಸ್ತೆ ಅಭಿವೃದ್ಧಿ ಕಾಮಗಾರಿಗೆ 15 ಲಕ್ಷ, ಅಂಬಿಕಾ ವೈಟ್ ರಸ್ತೆ ಹಾಗೂ ಲಕ್ಷ್ಮೀ ನಗರ 9ನೇ ಕ್ರಾಸ್ ರಸ್ತೆ ಅಭಿವೃದ್ಧಿಗೆ 15 ಲಕ್ಷ ಅನುದಾನ ಒದಗಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಪ್ರಗತಿ ಲೇಔಟ್ ನಲ್ಲಿ 8.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿಯೂ ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.

ಸ್ಥಳೀಯ ಮುಖಂಡರಾದ ಶರತ್ ಬೈಲಕೆರೆ, ವಿಜಯ ಪ್ರಕಾಶ್, ವಿನೋದ್ ಸುವರ್ಣ, ಚರಣ್ ರಾಜ್, ಅರುಣ್ ಜತ್ತನ್, ಸತೀಶ್ ಬೈಲಕೆರೆ, ಕೃಷ್ಣ ಶೆಟ್ಟಿ, ಗಾಯತ್ರಿ, ಮಾಲಿನಿ ಜತ್ತನ್, ಶಾಲಿನಿ, ಪುಷ್ಪ, ಪ್ರಶಾಂತ್ ಹೆಬ್ಬಾರ್, ರೇಖಾ, ಗೀತಾ ಶೆಟ್ಟಿ, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!