Saturday, July 25, 2026
Saturday, July 25, 2026

ಪೆರ್ಡೂರು: ಜನಸಂಪರ್ಕ ಸಭೆ

ಪೆರ್ಡೂರು: ಜನಸಂಪರ್ಕ ಸಭೆ

Date:

ಪೆರ್ಡೂರು, ಫೆ.8: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣೆ ಮತ್ತು ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ವಲಯ ಕಾರ್ಮಿಕರ ಸಮಸ್ಯೆ ಬಗ್ಗೆ ಅಹವಾಲು ಸ್ವೀಕಾರ ಮತ್ತು ಅರಿವು ಕಾರ್ಯಕ್ರಮ ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ನಡೆಯಿತು.

94 ಸಿ ಅಡಿಯಲ್ಲಿ 21 ಫಲಾನುಭವಿಗಳಿಗೆ ಖಾಯಂ ನಿವೇಶನ ಹಕ್ಕುಪತ್ರ ಹಾಗೂ ಪಂಚಾಯತ್ ನಿಧಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ ಮಾಡಿದರು.

ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಪೆರ್ಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುಮನ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!