ಕೋಟ, ಫೆ.9: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್, ಹಂದಟ್ಟು ಮಹಿಳಾ ಬಳಗದ ಸಹಯೋಗದೊಂದಿಗೆ ತೆಕ್ಕಟ್ಟೆ ಗ್ರಾಮ ಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಇವರ ಸಂಯೋಜನೆಯೊಂದಿಗೆ ಬೀಚ್ ಕ್ಲಿನಿಂಗ್ ನಲ್ಲಿ ಭಾಗವಹಿಸಿ ಬಹುಮಾನ ಗೆಲ್ಲಿ ಅಭಿಯಾನ ಭಾನವಾರ ತೆಕ್ಕಟ್ಟೆ ಗ್ರಾ.ಪಂ ಕೊಮೆ ಪ್ರದೇಶದಲ್ಲಿ ನಡೆಯಿತು.
ಮೊಗವೀರ ಯುವ ಸಂಘದ ನಿಯೋಜಿತ ಉಡುಪಿ ಜಿಲ್ಲಾಧ್ಯಕ್ಷ ರವೀಶ್ ಕೊರವಡಿ, ಕೊಮೆ ಕೊರವಡಿ ವಿವಿದ್ದೋದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಪೂಜಾರಿ, ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ರಾಘವೇಂದ್ರ ಹರಪ್ಪನಕೆರೆ, ಕೋಶಾಧಿಕಾರಿ ರಾಜೇಶ್ ಕಾಂಚನ್, ಪಂಚವರ್ಣ ಯುವಕ ಮಂಡಲದ ಸದಸ್ಯ ಮಹೇಶ್ ಬೆಳಗಾವಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ತೆಕ್ಕಟ್ಟೆ ಎಸ್ ಎಲ್ ಆರ್ ಎಂ ಘಟಕದ ನಿರ್ವಾಹಕಿ ರೇವತಿ ತೆಕ್ಕಟ್ಟೆ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ರವೀಂದ್ರ ಕೋಟ ಸ್ವಾಗತಿಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ತಿಳಿಸಿದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.




By
ForthFocus™