Monday, October 19, 2026
Monday, October 19, 2026

ಪಂಚವರ್ಣ: ‘ಬೀಚ್ ಕ್ಲಿನಿಂಗ್ ನಲ್ಲಿ ಭಾಗವಹಿಸಿ ಬಹುಮಾನ ಗೆಲ್ಲಿ’ ಅಭಿಯಾನ

ಪಂಚವರ್ಣ: ‘ಬೀಚ್ ಕ್ಲಿನಿಂಗ್ ನಲ್ಲಿ ಭಾಗವಹಿಸಿ ಬಹುಮಾನ ಗೆಲ್ಲಿ’ ಅಭಿಯಾನ

Date:

ಕೋಟ, ಫೆ.9: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್, ಹಂದಟ್ಟು ಮಹಿಳಾ ಬಳಗದ ಸಹಯೋಗದೊಂದಿಗೆ ತೆಕ್ಕಟ್ಟೆ ಗ್ರಾಮ ಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಇವರ ಸಂಯೋಜನೆಯೊಂದಿಗೆ ಬೀಚ್ ಕ್ಲಿನಿಂಗ್ ನಲ್ಲಿ ಭಾಗವಹಿಸಿ ಬಹುಮಾನ ಗೆಲ್ಲಿ ಅಭಿಯಾನ ಭಾನವಾರ ತೆಕ್ಕಟ್ಟೆ ಗ್ರಾ.ಪಂ ಕೊಮೆ ಪ್ರದೇಶದಲ್ಲಿ ನಡೆಯಿತು.

ಮೊಗವೀರ ಯುವ ಸಂಘದ ನಿಯೋಜಿತ ಉಡುಪಿ ಜಿಲ್ಲಾಧ್ಯಕ್ಷ ರವೀಶ್ ಕೊರವಡಿ, ಕೊಮೆ ಕೊರವಡಿ ವಿವಿದ್ದೋದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಪೂಜಾರಿ, ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ರಾಘವೇಂದ್ರ ಹರಪ್ಪನಕೆರೆ, ಕೋಶಾಧಿಕಾರಿ ರಾಜೇಶ್ ಕಾಂಚನ್, ಪಂಚವರ್ಣ ಯುವಕ‌ ಮಂಡಲದ ಸದಸ್ಯ ಮಹೇಶ್ ಬೆಳಗಾವಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ತೆಕ್ಕಟ್ಟೆ ಎಸ್ ಎಲ್ ಆರ್ ಎಂ ಘಟಕದ ನಿರ್ವಾಹಕಿ ರೇವತಿ ತೆಕ್ಕಟ್ಟೆ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ರವೀಂದ್ರ ಕೋಟ ಸ್ವಾಗತಿಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ತಿಳಿಸಿದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!