Wednesday, March 4, 2026
Wednesday, March 4, 2026

ಕ್ಯಾನ್ಸರ್ ಬಗ್ಗೆ ಜನಜಾಗೃತಿಯಿಂದ ಆರಂಭಿಕ ಪತ್ತೆ ಹಾಗೂ ಚಿಕಿತ್ಸೆ ಸಾಧ್ಯ: ಶಾಸಕ ಯಶ್ಪಾಲ್ ಸುವರ್ಣ

ಕ್ಯಾನ್ಸರ್ ಬಗ್ಗೆ ಜನಜಾಗೃತಿಯಿಂದ ಆರಂಭಿಕ ಪತ್ತೆ ಹಾಗೂ ಚಿಕಿತ್ಸೆ ಸಾಧ್ಯ: ಶಾಸಕ ಯಶ್ಪಾಲ್ ಸುವರ್ಣ

Date:

ಉಡುಪಿ, ಫೆ.10: ಕ್ಯಾನ್ಸರ್ ಮಾರಣಾಂತಿಕ ರೋಗವಾಗಿದ್ದು, ರೋಗದ ಆರಂಭಿಕ ಪತ್ತೆಯಿಂದ ಅನೇಕ ಜೀವಗಳನ್ನು ಉಳಿಸಬಹುದು. ಅನಾರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ಬರುವ ಸಂಭವ ಹೆಚ್ಚು. ರೋಗ ಹಾಗೂ ಆರಂಭಿಕ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದಾಗ ಕ್ಯಾನ್ಸರ್ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಗ್ಗಿಸಿ ಆರೋಗ್ಯಯುಕ್ತ ಜೀವನವನ್ನು ನಮ್ಮದಾಗಿಸಿ ಕೊಳ್ಳಬಹುದು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಆದರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆದರ್ಶ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸಾಂಕ್ರಾಮಿಕ ರೋಗಗಳ ಘಟಕ ಎನ್‌ಸಿಡಿ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್‌ಸಿಡಿ ವಿಭಾಗ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಉಡುಪಿ ಕಾಲೇಜ್ ಆಫ್ ನರ್ಸಿಂಗ್, ಸಿಎಸ್‌ಐ ಲೊಂಬಾರ್ಡ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್ ಉಡುಪಿ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಜಿಲ್ಲೆಯು ಆರೋಗ್ಯ ಸೇವೆಯಲ್ಲಿಯೂ ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ. ಜಿಲ್ಲೆಯ ವೈದ್ಯರು ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ. ತಮ್ಮ ಕರ್ತವ್ಯದ ಜೊತೆಗೆ ಸಮಾಜ ಸೇವೆಯಲ್ಲಿ ನಿರತರಾಗಿರುವ ವೈದ್ಯಾಧಿಕಾರಿಗಳು ಅಸಾಂಕ್ರಾಮಿಕ ರೋಗಗಳ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಜನರೂ ಕೂಡಾ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಪೋಷಕಾಂಶಯುಕ್ತ ಆಹಾರ ಸೇವನೆ ಮತ್ತು ದಿನನಿತ್ಯ ಕನಿಷ್ಟ 2 ಗಂಟೆ ವ್ಯಾಯಾಮ ಮಾಡುವ ಜೊತೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದ ಅವರು, ನೂತನ ಜಿಲ್ಲಾಸ್ಪತ್ರೆಯ ಕಾಮಗಾರಿಗಳು ಶೇ.70 ರಷ್ಟು ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಆಸ್ಪತ್ರೆಯು ಸಾರ್ವಜನಿಕರಿಗೆ ಮುಕ್ತವಾದಲ್ಲಿ ಜಿಲ್ಲೆಯ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಲಿದೆ ಎಂದರು. ಎಂಸಿಎಚ್ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ಕವಿತಾ ಹಾಗೂ ಆದರ್ಶ ಆಸ್ಪತ್ರೆ ಕ್ಯಾನ್ಸರ್ ತಜ್ಞ ಡಾ.ಅನಂತ ಎಸ್.ಮಠದ್ ಕ್ಯಾನ್ಸರ್ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕೀಮೋ ಚಿಕಿತ್ಸೆ ಫಲಾನುಭವಿಗಳಿಗೆ ಆಹಾರದ ಕಿಟ್ ವಿತರಿಸಲಾಯಿತು.

ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ ವಾಸುದೇವ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್, ಆದರ್ಶ ಆಸ್ಪತ್ರೆ ಮುಖ್ಯಸ್ಥ ಡಾ. ಜಿ ಎಸ್ ಚಂದ್ರಶೇಖರ್, ಫುಡ್ ಫಾರ್ ದ ಹಂಗ್ರಿ ಫೌಂಡೇಶನ್ ನ ನಿಧಿ, ಐಎಂಎ ಅಧ್ಯಕ್ಷ ಡಾ. ಅಶೋಕ್ ಕುಮಾರ್, ಕಾರ್ಯದರ್ಶಿ ಡಾ. ಮಾನಸ ಈ.ಆರ್ ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಚಂದ್ರಕಲಾ ನಿರೂಪಿಸಿ, ಶಶಿಧರ್ ಹೆಚ್ ವಂದಿಸಿದರು. ಜಿಲ್ಲಾ ಆಸ್ಪತ್ರೆ ಆವರಣದಿಂದ ಬ್ರಹ್ಮಗಿರಿ ಸರ್ಕಲ್ ಸುತ್ತುವರೆದು ಪುನಃ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸಮಾಪನಗೊಂಡ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್ ಬಲೂನ್ ಹಾರಿ ಬಿಡುವುದರ ಮೂಲಕ ಚಾಲನೆ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಧಾನಗಳ ಅರಿವು ಕಾರ್ಯಕ್ರಮ

ತೆಂಕನಿಡಿಯೂರು, ಮಾ.4: ಯಶಸ್ವಿ ಪ್ರಾಜೆಕ್ಟ್ಗಾಗಿ ಸ್ಪಷ್ಟ ಸಂಶೋಧನಾ ಸಮಸ್ಯೆ, ನಿರ್ದಿಷ್ಟ ಉದ್ದೇಶಗಳು,...

ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಮಾ.4: ಕರ್ನಾಟಕ ಕುರಿ ಮತ್ತು ಎಣ್ಣೆ ಅಭಿವೃದ್ಧಿ ನಿಗಮ ನಿಯಮಿತ,...

ಮಹನೀಯರುಗಳ ತತ್ವಾದರ್ಶ ಪಾಲನೆಯಿಂದ ಮೌಲ್ಯಯುತ ಸಮಾಜ ನಿರ್ಮಾಣ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಮಾ.4: ಶ್ರೀ ರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ಹಲವಾರು...

ಮಂಗಳೂರು ವಿವಿ ಪದವಿ ಪರೀಕ್ಷೆ: ರಥಬೀದಿ ಪದವಿ ಕಾಲೇಜಿಗೆ ಎರಡು ರ‍್ಯಾಂಕ್

ಮಂಗಳೂರು, ಮಾ.4: 2024-25 ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ...
error: Content is protected !!