Friday, September 4, 2026
Friday, September 4, 2026

ಬಜೆ ಅಣೆಕಟ್ಟಿಗೆ ಅಧಿಕಾರಿಗಳೊಂದಿಗೆ ಶಾಸಕರ ಭೇಟಿ

ಬಜೆ ಅಣೆಕಟ್ಟಿಗೆ ಅಧಿಕಾರಿಗಳೊಂದಿಗೆ ಶಾಸಕರ ಭೇಟಿ

Date:

ಹಿರಿಯಡಕ, ಫೆ.10: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ಉಡುಪಿ ನಗರದ ಜನತೆಗೆ ನಿರಂತರ ನೀರು ಸರಬರಾಜಿಗೆ ಯಾವುದೇ ಯಾವುದೇ ಸಮಸ್ಯೆಯಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.

ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ ನೀರು ಸರಬರಾಜಾಗುತ್ತಿದ್ದು, ಬಜೆ ಅಣೆಕಟ್ಟಿನಲ್ಲೂ ನಿರಂತರ ನೀರು ಸರಬರಾಜಿಗೆ ಪೂರಕ ನೀರಿನ ಲಭ್ಯತೆ ಇದೆ ಎಂದರು.

ಇತ್ತೀಚೆಗೆ ಉನ್ನತೀಕರಣಗೊಂಡ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಕಾರ್ಯಚಟುವಟಿಕೆಗಳ ಬಗ್ಗೆ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ, ಘಟಕವನ್ನು ಉತ್ತಮವಾಗಿ ನಿರ್ವಹಿಸಿ ಉಡುಪಿ ಜನತೆಗೆ ನಿರಂತರ ಶುದ್ಧ ಕುಡಿಯುವ ನೀರು ಸರಬರಾಜಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.

ನಗರಸಭೆ ಪೌರಾಯುಕ್ತರಾದ ಮಹಾಂತೇಶ್ ಹಂಗರಗಿ, ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಮಾಜಿ ಸದಸ್ಯರಾದ ಸುಮಿತ್ರಾ ನಾಯಕ್, ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ, ಸಂತೋಷ್ ಜತ್ತನ್, ಟಿ. ಜಿ. ಹೆಗ್ಡೆ, ಮಂಜುನಾಥ ಮಣಿಪಾಲ, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್, ವಾರಾಹಿ ಯೋಜನೆಯ ಆರ್ಕೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!