Thursday, March 26, 2026
Thursday, March 26, 2026

ಖಾದಿ ಉಡುಪುಗಳ ಮಾರಾಟ ಮಳಿಗೆಗೆ ಅಪರ ಜಿಲ್ಲಾಧಿಕಾರಿ ಭೇಟಿ

ಖಾದಿ ಉಡುಪುಗಳ ಮಾರಾಟ ಮಳಿಗೆಗೆ ಅಪರ ಜಿಲ್ಲಾಧಿಕಾರಿ ಭೇಟಿ

Date:

ಮಣಿಪಾಲ, ಫೆ.11: ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವ ಕುರಿತು ಸರ್ಕಾರ ಹೊರಡಿಸಿರುವ ಸುತ್ತೋಲೆ ಅಂಗವಾಗಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದ ಆವರಣದಲ್ಲಿ ಶ್ರೀ ಭಾರತಾಂಭೆ ಮಹಿಳಾ ಖಾದಿ ಗ್ರಾಮೋದ್ಯೋಗ ಕೈಗಾರಿಕಾ ಸಂಘ (ರಿ) ದಾವಣಗೆರೆ ಇವರು ತಯಾರಿಸಿದ ಖಾದಿ ಉಡುಪುಗಳ ಮಾರಾಟ ಮಳಿಗೆ ನಡೆಸುತ್ತಿದ್ದು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಭೇಟಿ ನೀಡಿ, ಉಡುಪುಗಳನ್ನು ವೀಕ್ಷಿಸಿದರು. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ವಿದ್ಯಾ, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಯು. ಆನಂದ ಜತ್ತನ್, ಕಾರ್ಯದರ್ಶಿ ನಿರ್ಮಲಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾಣಪುರ: ಶ್ರೀ ಸುಧೀಂದ್ರ ಮಂಟಪ

ಕಲ್ಯಾಣಪುರ, ಮಾ.26: ಕಾಶೀ ಮಠಾಧೀಶರಾಗಿದ್ದ ಶ್ರೀ ಸುಧೀಂದ್ರತೀರ್ಥ ಶ್ರೀಪಾದಂಗಳವರ ಜನ್ಮ ಶತಮಾನೋತ್ಸವದ...

ಅಜ್ಜರಕಾಡು: ಬಡ ರೋಗಿಗಳಿಗೆ ಆಹಾರ ಪಧಾರ್ಥಗಳ ಕಿಟ್ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಉಡುಪಿ, ಮಾ.26: ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಎಂ.ಸಿ.ಕೆ.ಎಸ್ ಫುಡ್...

ಕುಂದಾಪುರದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ

ಉಡುಪಿ, ಮಾ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ...
error: Content is protected !!