Tuesday, April 28, 2026
Tuesday, April 28, 2026

ಜೆಸಿಐ: ತರಬೇತಿ ಕಾರ್ಯಕ್ರಮ

ಜೆಸಿಐ: ತರಬೇತಿ ಕಾರ್ಯಕ್ರಮ

Date:

ಉಡುಪಿ, ಫೆ.11: ಜೇಸಿಐ ವಲಯ 15 ಇದರ ವತಿಯಿಂದ ಜೇಸಿಐ ಉಡುಪಿ ಸಿಟಿ ಇದರ ಆಶ್ರಯದಲ್ಲಿ ನೂತನ ಸದಸ್ಯರಿಗೆ 2 ದಿನಗಳ ತರಬೇತಿ ಕಾರ್ಯಕ್ರಮ ಸ್ವಾಗತ್ -2026 ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಲಯ ಅಧ್ಯಕ್ಷ ಸಂತೋಷ್ ಶೆಟ್ಟಿ, ನೂತನ ಸದಸ್ಯರು ಅಂದೋಲನಕ್ಕೆ ಬಂದಾಗ ಅವರಿಗೆ ಜೇಸಿಯಲ್ಲಿ ಸಿಗುವ ಅವಕಾಶಗಳು ಮತ್ತು ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಕುರಿತು ಪರಿಚಯ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯುತ್ತಿದೆ ಎಂದರು. ಜೇಸಿಐ ಉಡುಪಿ ಸಿಟಿಯು ಉತ್ತಮವಾಗಿ ಈ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ ಎಂದರು.

ಸಭಾಧ್ಯಕ್ಷತೆಯನ್ನು ವಲಯ ಬೆಳವಣಿಗೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ರಂಜಿತ್ ಎಚ್ ಡಿ ವಹಿಸಿದ್ದರು. ಮುಖ್ಯ ತರಬೇತಿ ರಾಗಿ ಸತೀಶ್ ಭಟ್ ಬಿಳಿನೆಲೆ, ಸಹ ತರಬೇತುದಾರರಾಗಿ ದೀಪಕ್ ರಾಜ್ ಮತ್ತು ಅಕ್ಷತಾ ಶೆಟ್ಟಿ, ಭಾಗವಹಿಸಿದ್ದರು ಮುಖ್ಯ ಅತಿಥಿಗಳಾಗಿ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸಂದೀಪ್ ಕುಮಾರ್ ಶುಭ ಹಾರೈಸಿದರು. ವಲಯ ಉಪಾಧ್ಯಕ್ಷೆ ಡಾ. ಹರಿಣಾಕ್ಷಿ ಕರ್ಕೇರ, ಜೆಸಿ ಉಡುಪಿ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು ವಲಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!