Sunday, September 6, 2026
Sunday, September 6, 2026

ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಮಾತೃ ವೈಭವಕ್ಕೆ ಚಪ್ಪರ ಮೂಹೂರ್ತ

ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಮಾತೃ ವೈಭವಕ್ಕೆ ಚಪ್ಪರ ಮೂಹೂರ್ತ

Date:

ಕಾಪು, ಫೆ.12: ಫೆಬ್ರವರಿ 28 ರಿಂದ ಮೊದಲ್ಗೊಂದು ಮಾರ್ಚ್ 2ರವರೆಗೆ ಮೂರು ದಿನಗಳ ಪರ್ಯಂತ ಅತ್ಯಂತ ವಿಜ್ರಂಭಣೆಯಿಂದ ನಡೆಯಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – “ಮಾತೃ ವೈಭವ” ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಫೆಬ್ರವರಿ 11ರ ಬುಧವಾರದಂದು ದೇವಳದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ ಪಿ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯಲ್ಲಿ ಪ್ರಾರ್ಥಿಸಿ ಚಪ್ಪರ ಮಹೂರ್ತವನ್ನು ನೆರವೇರಿಸಲಾಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಮತ್ತು ಮಾತೃ ವೈಭವ ಸೇವಾ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ಲಾಲಾಜಿ ಆರ್ ಮೆಂಡನ್, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮತ್ತು ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮನೋಹರ ಎಸ್ ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್. ಪಾಲನ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ.ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶೇಖರ ಸಾಲ್ಯಾನ್, ಮನೋಹರ ರಾವ್, ಚರಿತ ದೇವಾಡಿಗ, ಮಾತೃ ವೈಭವ ಸೇವಾ ಸಮಿತಿಯ ಕಾರ್ಯಾಧ್ಯಕ್ಷ ಭಗವಾನ್ ದಾಸ್, ಪ್ರಭಾಕರ ಎಸ್. ಪೂಜಾರಿ, ಲಕ್ಷ್ಮೀಶ ತಂತ್ರಿ , ಗೌರವ ಸಲಹೆಗಾರ ವಿಕ್ರಂ ಕಾಪು, ನಿರ್ಮಲ್ ಕುಮಾರ್ ಹೆಗ್ಡೆ, ಶ್ರೀಕರ ಶೆಟ್ಟಿ ಕಲ್ಯ, ಮಾತೃ ವೈಭವ ಸೇವಾ ಸಮಿತಿ ಕಾರ್ಯದರ್ಶಿ ಜಯರಾಮ್ ಆಚಾರ್ಯ, ಪ್ರಮುಖರಾದ ಗೀತಾಂಜಲಿ ಎಂ ಸುವರ್ಣ, ಸುಧಾಕರ ಶೆಟ್ಟಿ ಮಕರ, ಕೆ ವಿಶ್ವನಾಥ್, ಬೀನಾ ವಾಸುದೇವ ಶೆಟ್ಟಿ, ಸಾವಿತ್ರಿ ಗಣೇಶ್, ಡಾ. ಪ್ರಶಾಂತ್ ಶೆಟ್ಟಿ, ಅನಿಲ್ ಕುಮಾರ್ ಕಾಪು, ಕಿರಣ್ ಆಳ್ವ, ರವಿರಾಜ್ ಶೆಟ್ಟಿ ಪಂಜಿತ್ತೂರು, ಉದಯ ಹೆಗ್ಡೆ ಮಲ್ಲಾರ್ , ಸುನಿಲ್ ಎಸ್. ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!