Sunday, March 29, 2026
Sunday, March 29, 2026

ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ

ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ

Date:

ಉಡುಪಿ, ಫೆ.14: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಕಛೇರಿ, ಹೋಟೆಲ್, ಬ್ಯಾಂಕ್, ಕಂಪೆನಿಗಳು, ಅಂಗಡಿಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿರುವಂತೆ ಹಾಗೂ ನಾಮಫಲಕದ ಜೊತೆಗೆ ಆ ಸ್ಥಳದ ಐತಿಹ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಊರಿನ ಹೆಸರನ್ನು ಸಹ ನಮೂದಿಸುವುದು ಕಡ್ಡಾಯವಾಗಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು, ತಮ್ಮ ಉದ್ದಿಮೆಯ ನಾಮಫಲಕದಲ್ಲಿ ಊರಿನ ಹೆಸರಿನೊಂದಿಗೆ ಕನ್ನಡದಲ್ಲಿ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಮತ್ತು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕವನ್ನು ಶೇ.60ರಷ್ಟು ಪ್ರದರ್ಶಿಸಬೇಕು.

ಈವರೆಗೂ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳದ/ನವೀಕರಿಸದೇ ಇರುವ ಉದ್ದಿಮೆದಾರರು, ಉದ್ದಿಮೆ ಪರವಾನಿಗೆ ಪಡೆಯಲು ನಿಯಮಾನುಸಾರ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದರೂ, ಸಹ ಕೆಲವು ವಾಣಿಜ್ಯ ಮಳಿಗೆಗಳು ನಗರಸಭೆಯ ಸೂಚನೆಗಳನ್ನು ಪಾಲಿಸದೆ ಇರುವುದು ಕಂಡು ಬಂದಿರುತ್ತದೆ. ಫೆಬ್ರವರಿ ಮಾಹೆಯೊಳಗೆ ನಾಮಫಲಕವನ್ನು ಆಳವಡಿಸದಿದ್ದರೆ ದಂಡ ವಿಧಿಸಲಾಗುವುದು ಹಾಗೂ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

ನವದೆಹಲಿ, ಮಾ.28: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೋಯ್ಡಾದ ಜೇವರ್‌ನಲ್ಲಿ...

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!