Wednesday, March 4, 2026
Wednesday, March 4, 2026

ಸ್ತ್ರೀ ಶಕ್ತಿ ಬಲವರ್ಧನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಕೋಟ ಶ್ರೀನಿವಾಸ ಪೂಜಾರಿ

ಸ್ತ್ರೀ ಶಕ್ತಿ ಬಲವರ್ಧನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಕೋಟ ಶ್ರೀನಿವಾಸ ಪೂಜಾರಿ

Date:

ಕೋಟ, ಫೆ.14: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಕಷ್ಟು ಕುಟುಂಬಗಳು ತಮ್ಮ ಜೀವನ ಕಟ್ಟಿಕೊಂಡು ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶುಕ್ರವಾರ ಕೋಟತಟ್ಟು ಪಂಚಾಯತ್ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತರಬೇತಿ ನಿರತ ಅಮೃತ ಪೂಜಾರಿ ಕದ್ರಿಕಟ್ಟು ಇವರಿಗೆ ಸಂಸದ ಕೋಟ ಪ್ರಮಾಣ ಪತ್ರವನ್ನು ವಿತರಿಸಿದರು. ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ಕೋಟ ವಲಯ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕಸಾಪ ತಾಲೂಕು ಅಧ್ಯಕ್ಷ ಜಿ.ರಾಮಚಂದ್ರ ಐತಾಳ್, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ರವೀಂದ್ರ ಐತಾಳ್ ಪಾರಂಪಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರಮೇಶ್ ಪಿ ಕೆ., ಕೋಟ ಒಕ್ಕೂಟದ ಪ್ರೇಮ ಹಂದಟ್ಟು, ತರಬೇತುದಾರೆ ಸೇವಾಪ್ರತಿನಿಧಿ ಶೋಭಾ ಶಂಕರ್ ಪುತ್ರನ್ ಉಪಸ್ಥಿತರಿದ್ದರು. ಮೇಲ್ವಿಚಾರಕ ನಾಗೇಶ್ ಸ್ವಾಗತಿಸಿ, ಯೋಜನೆಯ ಒಕ್ಕೂಟದ ಮೇಲ್ವಿಚಾರಕಿ ಪುಷ್ಭಲತಾ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಶ್ರೀಲಕ್ಷ್ಮೀ ಪ್ರಭು ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿ, ಮಾ.2: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ...

ಯೋಜನಾ ವರದಿ ಕಾರ್ಯಾಗಾರ

ಹಿರಿಯಡಕ, ಮಾ.2: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಜ್ಯಶಾಸ್ತ್ರ ವಿಭಾಗದ...
error: Content is protected !!