ಕೋಟ, ಫೆ.15: ಯುವ ಜನಾಂಗದಲ್ಲಿ ಪರಿಸರ ಜಾಗೃತಿ ಪ್ರಜ್ಞೆ ಬೆಳೆಯಬೇಕು. ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಲು ಪಣ ತೊಡಬೇಕು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಹೇಳಿದರು.
ಭಾನುವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆ ಬೀಚ್ ನಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್ ಇವರ ಸಹಯೋಗದೊಂದಿಗೆ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಇವರ ಸಂಯೋಜನೆಯೊಂದಿಗೆ ಕ್ಯಾಪ್ಸ್ ಫೌಂಡೇಶನ್ ಬೆಂಗಳೂರು ಇವರ ಬಹುಮಾನ ಪ್ರಾಯೋಜಕತ್ವದಲ್ಲಿ 291 ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಪಂಚವರ್ಣ ಸಂಘಟನೆ ಗೌರವ ಸಲಹೆಗಾರ ರಘು ಮಧ್ಯಸ್ಥ,ಕೋಡಿ ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ, ವಿನ್ ಲೈಟ್ ಸ್ಪೋರ್ಟ್ ಕ್ಲಬ್ ಮಾಜಿ ಅಧ್ಯಕ್ಷ ಗಿರೀಶ್ ಪೂಜಾರಿ, ಕಾರ್ಯದರ್ಶಿ ಸುಧಾಕರ್ ಪೂಜಾರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಹಂದಟ್ಟು ಮಹಿಳಾ ಬಳಗದ ಸ್ಥಾಪಕಾಧ್ಯಕ್ಷೆ ಪುಷ್ಭಾ ಹಂದಟ್ಟು, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸುಮಾರು ೨೪ ಯುವಕರು ಈ ಕಾರ್ಯದಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದುಕೊಂಡರು. ರವೀಂದ್ರ ಕೋಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ವಸಂತಿ ಹಂದಟ್ಟು ವಂದಿಸಿದರು.




By
ForthFocus™