Tuesday, March 3, 2026
Tuesday, March 3, 2026

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಜಿಲ್ಲಾಸ್ಪತ್ರೆ ಭೇಟಿ

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಜಿಲ್ಲಾಸ್ಪತ್ರೆ ಭೇಟಿ

Date:

ಉಡುಪಿ, ಫೆ.19: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷ ಟಿ.ಶ್ಯಾಮ್ ಭಟ್ ಡಾ.ಟಿ.ಶಾಂ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೀಕ್ಷಣೆ ನಡೆಸಿ, ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾಸ್ಪತ್ರೆಯ ನೋಂದಣಿ ಕೇಂದ್ರ, ರೋಗಿಗಳ ವಾರ್ಡ್, ತೀವ್ರ ನಿಗಾ ಘಟಕ, ಔಷಧಿ ಉಗ್ರಾಣ, ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡುತ್ತಾ, ಆಸ್ಪತ್ರೆಯ ಪ್ರವೇಶದ್ವಾರದಲ್ಲಿ ರೋಗಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಲು ಹೆಚ್ಚು ಜನರು ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದ ಹಿನ್ನೆಲೆ, ಜಿಲ್ಲಾ ಸರ್ಜನ್ ಅವರಿಗೆ ನೋಂದಣಿ ಕೌಂಟರ್‌ಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಇನ್ನೂ ಹೆಚ್ಚು ನೋಂದಣಿ ಕೌಂಟರ್‌ಗಳನ್ನು ಸ್ಥಾಪಿಸಲು ತಿಳಿಸಿದ ಅವರು, ಆಸ್ಪತ್ರೆಯ ಚಿಕಿತ್ಸೆಗೆ ಬಂದಿರುವ ರೋಗಿಗಳಿಂದ ಚಿಕಿತ್ಸೆ ನೀಡುವ ಬಗ್ಗೆ ಮಾಹಿತಿಗಳನ್ನು ಕೇಳಿ ಪಡೆದರು.

ಆಸ್ಪತ್ರೆಯ ಸ್ವಚ್ಛತೆ, ಶುಭ್ರತೆ, ಪರಿಶೀಲಿಸಿದ ಅವರು, ಆಸ್ಪತ್ರೆಯ ಒಳ ಕಾರಿಡಾರ್‌ಗಳಲ್ಲಿ ಬೆಳಕಿನ ಅಭಾವ ಕಂಡು ಬಂದ ಹಿನ್ನಲೆ, ಕಾರಿಡಾರ್‌ಗಳಲ್ಲಿ ಲೈಟ್‌ಗಳನ್ನು ಅಳವಡಿಸಲು ಸೂಚನೆ ನೀಡಿದರು. ರಾಜ್ಯದ ಔಷಧಿ ಕೇಂದ್ರಗಳಿಂದ ಸರಬರಾಜಾದ ಔಷಧಿ ಸೇರಿದಂತೆ ಮತ್ತಿತರ ಪರಿಕರಗಳನ್ನು ಉಗ್ರಾಣದ ಒಳಭಾಗದಲ್ಲಿ ಇಡದೇ ಕಾರಿಡಾರ್ ಗಳಲ್ಲಿ ದಾಸ್ತಾನು ಮಾಡಿರುವ ಬಗ್ಗೆ ಪ್ರಶ್ನಿಸಿದ ಅವರು, ಔಷಧಿಗಳು ಅವಧಿ ಮುನ್ನವೇ ಜನಸಾಮಾನ್ಯರಿಗೆ ಉಪಯೋಗಕ್ಕೆ ಬರುವಂತೆ ಕ್ರಮವಹಿಸಬೇಕೆಂದರು.

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಸ್ಪತ್ರೆಯ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದ ಅವರು, ಆಸ್ಪತ್ರೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿಗಳ ಬಗ್ಗೆ ಹಾಗೂ ಹೆಚ್ಚುವರಿ ಬೇಡಿಕೆಗಳಿಗಾಗಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು. ಜಿಲ್ಲಾ ಸರ್ಜನ್ ಡಾ. ಅಶೋಕ್, ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿ, ಮಾ.2: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ...

ಯೋಜನಾ ವರದಿ ಕಾರ್ಯಾಗಾರ

ಹಿರಿಯಡಕ, ಮಾ.2: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಜ್ಯಶಾಸ್ತ್ರ ವಿಭಾಗದ...
error: Content is protected !!