Sunday, February 22, 2026
Sunday, February 22, 2026

ರಾಜ್ಯ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕೇಂದ್ರ ಗೃಹ ಮಂತ್ರಾಲಯದ ಪದಕ

ರಾಜ್ಯ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕೇಂದ್ರ ಗೃಹ ಮಂತ್ರಾಲಯದ ಪದಕ

Date:

ಉಡುಪಿ, ಫೆ.20: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶ್ ಅವರಿಗೆ, ಇಲಾಖೆಯು ಉತ್ತಮ ಹಾಗೂ ನಿಷ್ಠೆಯ ಸೇವೆಗಾಗಿ, ತುರ್ತು ಪರಿಸ್ಥಿತಿಯಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ನೀಡುವ DG FS BRONZE DISC & COMMENDATION CERTIFICATE ಪದಕವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕರ ಉಪಸ್ಥಿತಿಯಲ್ಲಿ ಇತ್ತೀಚೆಗೆ ಪಡೆದಿರುತ್ತಾರೆ.

2005 ರಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಗೊಂಡು ಆರ್.ಎ ಮುಂಡ್ಕೂರ್ ತರಬೇತಿ ವಿದ್ಯಾಲಯದಲ್ಲಿ ತರಬೇತಿ ಪಡೆದು 2006 ರಲ್ಲಿ ಮೂಡಬಿದ್ರೆ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, 2018 ರಲ್ಲಿ ಮೈಸೂರು ಹೆಬ್ಬಾಳ ಅಗ್ನಿಶಾಮಕ ಠಾಣೆಗೆ ಪದೋನ್ನತಿ ವರ್ಗಾವಣೆ ಪಡೆದು ಪ್ರಸ್ತುತ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತಮ್ಮ ಕರ್ತವ್ಯದ ಅವಧಿಯಲ್ಲಿ ಜನರ ಪ್ರಾಣ ಹಾಗೂ ಆಸ್ತಿಗಳ ರಕ್ಷಣೆಗಾಗಿ ಹಲವು ಪುರಸ್ಕಾರಗಳು ಹಾಗೂ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಪಡೆದಿರುತ್ತಾರೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಉಡುಪಿ, ಫೆ. 21: ಕರ್ನಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ...

ಇಂದಿನ ಯುವಪೀಳಿಗೆ ಸನ್ಮಾರ್ಗ ದಾರಿಯಲ್ಲಿ ಸಾಗಲು ಸರ್ವಜ್ಞರ ತ್ರಿಪದಿಗಳು ಸಹಕಾರಿ: ಎಂ. ಎ ಗಫೂರ್

ಉಡುಪಿ, ಫೆ.21: ಜನಸಾಮಾನ್ಯರಿಗೆ ಅರ್ಥವಾಗುವ ಸರಳ ಭಾಷೆ ಮತ್ತು ಪದಗಳಲ್ಲಿ ತ್ರಿಪದಿಗಳನ್ನು...

ಎನ್ಎಸ್ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಹಬಾಳ್ವೆ ತರಲು ಸಹಕಾರಿ: ದಿನಕರ ಹೇರೂರು

ಉಪ್ಪೂರು, ಫೆ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿನ ರಾಷ್ಟ್ರೀಯ...

ಶಿವಾಜಿ ಆಡಳಿತ ವ್ಯವಸ್ಥೆಯ ಕೌಶಲ್ಯಗಳು ದೂರದೃಷ್ಠಿ ನಾಯಕತ್ವಕ್ಕೆ ಸಾಕ್ಷಿ: ಎಂ.ಎ ಗಫೂರ್

ಉಡುಪಿ, ಫೆ.20: ಧೈರ್ಯ, ಶೌರ್ಯ ಹಾಗೂ ಧೀಮಂತ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದ ಛತ್ರಪತಿ...
error: Content is protected !!