Wednesday, January 22, 2025
Wednesday, January 22, 2025

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ- ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ- ಅರ್ಜಿ ಆಹ್ವಾನ

Date:

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಹಿನ್ನಿರು/ ಲವಣ/ ಕ್ಷಾರೀಯ ಪ್ರದೇಶಗಳಲ್ಲಿ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಸಿಹಿನೀರಿನ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಕಡಲ ಮೀನುಗಳ ಸಣ್ಣ ಹ್ಯಾಚರಿ ಕೇಂದ್ರಗಳ ಸ್ಥಾಪನೆ, ಕಡಲ ಕಳೆ ಕೃಷಿಗೆ ರ‍್ಯಾಫ್ಟ್ ಪದ್ದತಿ, ಮೊನೊಲಿನ್/ಟ್ಯೂಬೆನೆಟ್ ಪದ್ಧತಿ ವಿಧಾನದೊಂದಿಗೆ ಕಡಲಕಳೆ ಕೃಷಿ ಸ್ಥಾಪನೆ, ಬ್ಯಾಕ್ ಯಾರ್ಡ ಅಲಂಕಾರಿಕ ಮೀನು ಸಾಕಾಣಿಕೆ ಘಟಕ, ಮಧ್ಯಮ ಪ್ರಮಾಣದ ಅಲಂಕಾರಿಕ ಮೀನು ಸಾಕಾಣಿಕ ಘಟಕ, ಮಧ್ಯಮ ಆರ್.ಎ.ಎಸ್ ಘಟಕ ಸ್ಥಾಪನೆ, ಸಣ್ಣ ಆರ್.ಎ.ಎಸ್ ಘಟಕ, ಹಿತ್ತಲಿನ ಮಿನಿ ಆರ್.ಎ.ಎಸ್ ಘಟಕಗಳ ಸ್ಥಾಪನೆ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರಗಳ ನಿರ್ಮಾಣ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರಗಳ ಆಧುನೀಕರಣ, ಐಸ್ ಪೆಟ್ಟಿಗೆಗಳೊಂದಿಗೆ ಸೈಕಲ್, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ, ರಫ್ತು ಸಾಮರ್ಥ್ಯಕ್ಕಾಗಿ ಅಸ್ತಿತ್ವದಲ್ಲಿರುವ ಮೀನುಗಾರಿಕಾ ದೋಣಿಗಳ ಉನ್ನತೀಕರಣ, ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಲ್ಲಿ ಜೈವಿಕ ಶೌಚಾಲಯಗಳ ಸ್ಥಾಪನೆ, ಸಾಂಪ್ರದಾಯಿಕ ಮತ್ತು ಯಾಂತ್ರೀಕೃತ ದೋಣಿಗಳಿಗೆ ಸಂವಹನ ಮತ್ತು ಟ್ರಾಕಿಂಗ್ ಸಾಧನಗಳು, ಸಾಂಪ್ರದಾಯಿಕ ಮತ್ತು ಯಾಂತ್ರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ ದೋಣಿ (ಬದಲಿ) ಮತ್ತು ಬಲೆ ಒದಗಿಸುವುದು ಹಾಗೂ ನೀಲಿಕ್ರಾಂತಿ ಯೋಜನೆಯಡಿ 10 ಮೀ ಉದ್ದದ ಎಫ್.ಆರ್.ಪಿ ದೋಣಿ ಶಾಖ ನಿರೋಧಕ ಐಸ್ ಮತ್ತು ಮೀನು ಪೆಟ್ಟಿಗೆ ಮತ್ತು ಕಡಲಕಳೆ ಕೃಷಿ ಘಟಕಗಳಿಗೆ ಜೂನ್ 30 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!