ಉಡುಪಿ, ಫೆ.22: ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆಬ್ರವರಿ 25 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬೆಳಗ್ಗೆ 11.10 ಕ್ಕೆ ಹೆಲಿಕಾಪ್ಟರ್ ಮೂಲಕ ಹೊರಟು 11.30 ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಬಂದಿಳಿಯಲಿರುವ ಅವರು, ಕಾಬೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, ಕಾರ್ಕಳ ತಾಲೂಕು ಕಚೇರಿ ರಸ್ತೆಯ ಕುಕ್ಕುಂದೂರು ನಲ್ಲಿ ಕಿಸಾನ್ ಸಭಾ ಟ್ರಸ್ಟ್ನ ಮಹಾತ್ಮಾಗಾಂಧಿ ವಸತಿ ಪ್ರೌಢಶಾಲೆಯ ಇದರ ಕಿಸಾನ್ ಸಭಾ ಸಭಾಂಗಣ ಹಾಗೂ 35ನೇ ವರ್ಷದ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಮುಖ್ಯಮಂತ್ರಿಗಳ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಮುಖ್ಯಮಂತ್ರಿಗಳ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮ
Date:




By
ForthFocus™