Monday, April 20, 2026
Monday, April 20, 2026

ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಉಡುಪಿ, ಫೆ.24: ಉಡುಪಿ ನಗರಸಭೆಯ ನಿಟ್ಟೂರು ಒಳಚರಂಡಿ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕದ ಪರಿಸರದಲ್ಲಿ ಸ್ಥಳೀಯ ಜನರಿಗೆ ದುರ್ವಾಸನೆ ಹಾಗೂ ಕುಡಿಯುವ ನೀರಿನ ಬಾವಿಗಳಿಗೆ ಕಲುಷಿತ ನೀರು ಸೇರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ತಕ್ಷಣ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಹಸಿರು ಪೀಠದ ಆದೇಶದ ಮೇರೆಗೆ ಮಂಜೂರಾದ 30 ಕೋಟಿ ಅನುದಾನದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕದ ಉನ್ನತೀಕರಣ ಕಾಮಗಾರಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು. ವೇಗವಾಗಿ ಬೆಳೆಯುತ್ತಿರುವ ಉಡುಪಿ ನಗರದ ಒಳಚರಂಡಿ ಕೊಳಚೆ ನೀರು ಶುದ್ಧೀಕರಣ ಘಟಕದ ಸಾಮರ್ಥ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ತಕ್ಷಣ ಯೋಜನೆಯನ್ನು ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ನಗರಸಭೆ ಪೌರಾಯುಕ್ತರಾದ ಮಹಾಂತೇಶ್ ಹಂಗರಗಿ, ನಗರಸಭೆಯ ಮಾಜಿ ಅಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಮಾಜಿ ಸದಸ್ಯರಾದ ಸಂತೋಷ್ ಜತ್ತನ್, ಬಾಲಕೃಷ್ಣ ಶೆಟ್ಟಿ, ಗಿರೀಶ್ ಅಂಚನ್, ಹರೀಶ್ ಶೆಟ್ಟಿ, ಸುಂದರ ಕಲ್ಮಾಡಿ, ಮಂಜುನಾಥ ಮಣಿಪಾಲ, ಅಶೋಕ್ ನಾಯ್ಕ್, ಗಿರಿಧರ ಆಚಾರ್ಯ ಕರಂಬಳ್ಳಿ, ಟಿ. ಜಿ. ಹೆಗ್ಡೆ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ...

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕಾಪು, ಏ.19: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ...

80 ಬಡಗುಬೆಟ್ಟು: ಶ್ರೀ ಬ್ರಹ್ಮಬೈದೇರುಗಳ ಗರೋಡಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಉಡುಪಿ, ಏ.19: ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಬ್ರಹ್ಮಬೈದೇರುಗಳ ಗರೋಡಿ 80 ಬಡಗುಬೆಟ್ಟು ಇಲ್ಲಿಗೆ...
error: Content is protected !!