Tuesday, March 3, 2026
Tuesday, March 3, 2026

ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆ: ಶಾಸಕ ಗುರುರಾಜ್ ಗಂಟಿಹೊಳೆ

ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆ: ಶಾಸಕ ಗುರುರಾಜ್ ಗಂಟಿಹೊಳೆ

Date:

ಬೈಂದೂರು, ಫೆ.24: ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆಯಾಗಬೇಕು ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮಾಡಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ವ್ಯಕ್ತಿಗಳ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಶನಿವಾರ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಥಮಿಕ ಶಾಲೆ ಇಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಗೋಪಾಲಕೃಷ್ಣ ಅಡಿಗ ಸ್ಮಾರಕ ಟ್ರಸ್ಟ್ ರಿ ಬೆಂಗಳೂರು ಇವರ ಸಹಯೋಗದಲ್ಲಿ ಕವಿ ಗೋಪಾಲಕೃಷ್ಣ ಅಡಿಗರ 108ನೇ ಜನ್ಮ ದಿನೋತ್ಸವದ ಪ್ರಯುಕ್ತ ಅಡಿಗ ಸಂಸ್ಮರಣೆ ಮತ್ತು ಕಾರಂತರ ಕುರಿತು ಉಪನ್ಯಾಸ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪುರಸ್ಕರಿಸಿ ಮಾತನಾಡಿದರು.

ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಗಣನಾಥ ಎಕ್ಕಾರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು ಶತಮಾನ ಪೂರೈಸಿದ ಅಡಿಗರು ಕಲಿತ ಮಾಧ್ಯಮಿಕ ಶಾಲೆ ವಿಷಯದ ಕುರಿತು ಶಾಲಾ ಮುಖ್ಯೋಪಾಧ್ಯಾಯ ಗಣಪತಿ ಹೋಬಳಿದಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಮೂಗೇರಿ ಸಮಷ್ಟಿ ಪುರಸ್ಕಾರ ಶಾಶ್ವತ ಫಲಕವನ್ನು ಕೆ ಪುಂಡಲೀಕ್ ನಾಯಕ್ ಇವರಿಗೆ ನೀಡಲಾಯಿತು. ಶಾಲಾ ಮಕ್ಕಳಿಗೆ ರಂಗೋಲಿ ಪ್ರಾತ್ಯಕ್ಷಿಕೆ ಮಾಡಿ ರಂಗೋಲಿ ಸ್ಪರ್ಧೆಯನ್ನು ಡಾ. ಭಾರತಿ ಮರವಂತೆ ನೆರವೇರಿಸಿದರು.

ಜೆಸಿಐ ಬೈಂದೂರು ಸಿಟಿ ಇದರ ಅಧ್ಯಕ್ಷರಾದ ಚೈತ್ರಾ ಸತೀಶ್, ಅರಣ್ಯ ಇಲಾಖೆ ಬೈಂದೂರು ಇದರ ಗಸ್ತು ಅರಣ್ಯಪಾಲಕ ವಿಜಯ್, ಶಾಲಾ ಅಭಿವೃದ್ಧಿ ಮತ್ತು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಭಾಸ್ಕರ್ ದೇವಾಡಿಗ ಉಪಸ್ಥಿತರಿದ್ದರು. ಡಾ.ಭಾರತಿ ಮರವಂತೆ ಸ್ವಾಗತಿಸಿ ವೀಣಾ ಹೆಗಡೆ ಮತ್ತು ಜಯ ನಿರೂಪಿಸಿ ಶಾಲಾ ಸಹಶಿಕ್ಷಕರಾದ ಶಶಿರೇಖಾ, ವಂದಿಸಿದರು. ತದನಂತರ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಚಿಂತಕಿ ಡಾ.ರೇಖಾ ಬನ್ನಾಡಿ ಮತ್ತು ವಿಮರ್ಶಕ ರಾಜೀವ ನಾಯಕ್ ಉಪನ್ಯಾಸ ನೀಡಿದರು. ಸಾಹಿತಿ ಗಣೇಶ್ ಅಡಿಗರ ಕವಿತ್ವದ ಬಗ್ಗೆ ಮಾತನಾಡಿದರು. ಹಿರಿಯ ಕೃಷಿಕ ಭದ್ರಪ್ಪ ಗೌಡ ಕವಿ ಗೋಪಾಲಕೃಷ್ಣ ಅಡಿಗರ ಹಾಡುಗಳನ್ನು ಹಾಡಿ ಅದರ ಮಹತ್ತ್ವವನ್ನು ವಿವರಿಸಿದರು. ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಅವರು ಸಮಾರಂಭದ ಆಶಯನುಡಿಗಳನ್ನಾಡಿದರು.

ಕಾಲೇಜಿನ ಪ್ರಾಂಶುಪಾಲ ವೆಂಕಟರಮಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪನ್ಯಾಸಕ ಚಂದ್ರಶೇಖರ ಸ್ವಾಗತಿಸಿದರು, ಕಾಲೇಜಿನ ಉಪಪ್ರಾಂಶುಪಾಲ ಪಿ. ಪದ್ಮನಾಭ, ಡಾ.ಶಿವರಾಮ ಕಾರಂತ ಟ್ರಸ್ಟ್ ಸದಸ್ಯರಾದ ಡಾ.ಭಾರತಿ ಮರವಂತೆ, ಡಾ.ಚೇತನ್ ಶೆಟ್ಟಿ ಕೋವಾಡಿ, ಅಡಿಗ ಟ್ರಸ್ಟ್ ಪ್ರವರ್ತಕ ಜಯರಾಮ ಉಪಸ್ಥಿತರಿದ್ದರು. ಉಪನ್ಯಾಸಕರಾದ ಸತೀಶ್ ನಿರೂಪಿಸಿದರೆ ಭರತ್ ಅವರು ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿ, ಮಾ.2: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ...

ಯೋಜನಾ ವರದಿ ಕಾರ್ಯಾಗಾರ

ಹಿರಿಯಡಕ, ಮಾ.2: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಜ್ಯಶಾಸ್ತ್ರ ವಿಭಾಗದ...

ಗ್ರಹಣ ಹೌದಾದರೂ ಗೋಚರ ಕಷ್ಟ

ವರ್ಷದ ಒಂದೇ ಗ್ರಹಣ ಚಂದ್ರಗ್ರಹಣ. ಮಾರ್ಚ್ 3 ಹುಣ್ಣಿಮೆಯಂದು. ಭಾರತೀಯರಿಗೆ ಇದು...
error: Content is protected !!