Saturday, April 25, 2026
Saturday, April 25, 2026

ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರ

ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರ

Date:

ಉಡುಪಿ, ಫೆ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು, ಆಯುಷ್ಮಾನ್ ಆರೋಗ್ಯ ಕೇಂದ್ರ ಮಲ್ಲಾರ್, ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಎನ್.ಸಿ.ಡಿ ಘಟಕ ಹಾಗೂ ಪುರಸಭೆ ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಮಲ್ಲಾರ್ ಫಕೀರ್ನಕಟ್ಟೆ ಶ್ರೀ ನಾರಾಯಣಗುರು ಬಿಲ್ಲವ ಸಂಘದಲ್ಲಿ ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರ ನಡೆಯಿತು. ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಸಾದ್ ನೇತ್ರಾಲಯದ ನೇತ್ರ ತಜ್ಞ ಡಾ. ಪ್ರೇಮ್ ಕಣ್ಣಿನ ಆರೋಗ್ಯ ಕುರಿತು ಮಾಹಿತಿ ನೀಡಿದರು.

ಪುರಸಭೆ ಸದಸ್ಯರಾದ ನೂರುದ್ದೀನ್, ಶೈಲೇಶ್, ಎನ್.ಸಿ.ಡಿ ವೈದ್ಯಾಧಿಕಾರಿ ಡಾ.ದೀಕ್ಷಾ, ಸಂಯೋಜಕರಾದ ಹರ್ಷ, ಮಾಸ್ಟರ್ ಮಲ್ಲಾರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಿರ್ಮಲಾ ಮೆಂಡನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಶಿ, ಸಮುದಾಯ ಆರೋಗ್ಯಾಧಿಕಾರಿ ಶೆರೋನ್, ಆರೋಗ್ಯ ನಿರೀಕ್ಷಣಾಧಿಕಾರಿ ಭವ್ಯಶ್ರಿ, ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಎನ್.ಸಿ.ಡಿ ಘಟಕದ ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಮಳೆ ಸಾಧ್ಯತೆ

ಉಡುಪಿ, ಏ.24: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಏಪ್ರಿಲ್ 25...

ಹಸ್ತಪ್ರತಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.24: ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ...

ಡಾ.ರಾಜ್‌ಕುಮಾರ್ ಅಪಾರ ಅಭಿಮಾನಿಗಳ ಹೃದಯದ ಕಣ್ಮಣಿಯಾಗಿದ್ದರು: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ, ಏ.24: ಕನ್ನಡದ ವರನಟ ಡಾ.ರಾಜ್‌ಕುಮಾರ್ ಜಯಂತಿ ಒಂದು ಅಪರೂಪದ ಕಾರ್ಯಕ್ರಮ....

ಬಿ.ಬಿ. ಹೆಗ್ಡೆ ಕಾಲೇಜು; ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕುಂದಾಪುರ, ಏ.24: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...
error: Content is protected !!