Sunday, July 26, 2026
Sunday, July 26, 2026

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಕೇಂದ್ರ ಬಜೆಟ್ ವಿಶ್ಲೇಷಣಾ ವಿಚಾರ ಸಂಕಿರಣ

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಕೇಂದ್ರ ಬಜೆಟ್ ವಿಶ್ಲೇಷಣಾ ವಿಚಾರ ಸಂಕಿರಣ

Date:

ಉಡುಪಿ, ಫೆ.25: ಎಂ.ಜಿ.ಎಂ ಸಂಧ್ಯಾ ಕಾಲೇಜು, ಉಡುಪಿ ಮತ್ತು ಐಸಿಎಐ ಉಡುಪಿ ಶಾಖೆ (SIRC) ಅವರ ಸಂಯುಕ್ತ ಆಶ್ರಯದಲ್ಲಿ “ಕೇಂದ್ರ ಬಜೆಟ್ ವಿಶ್ಲೇಷಣೆ” ಕುರಿತು ವಿದ್ಯಾರ್ಥಿ ವಿಚಾರ ಸಂಕಿರಣ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಸಿಎ ವೆಂಕಟರಮಣ ಕಾಮತ್ ಅವರು ಭಾಗವಹಿಸಿ ಕೇಂದ್ರ ಬಜೆಟ್‌ನ ಪ್ರಮುಖ ಅಂಶಗಳು, ಆರ್ಥಿಕ ಪರಿಣಾಮಗಳು ಹಾಗೂ ವಿದ್ಯಾರ್ಥಿಗಳಿಗೆ ಅದರ ಮಹತ್ವದ ಕುರಿತು ಸಮಗ್ರವಾಗಿ ವಿವರಿಸಿದರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್ ನಾಯಕ್ ಅವರು ಮಾತನಾಡಿ, ಇಂತಹ ವಿಚಾರ ಸಂಕಿರಣಗಳು ವಿದ್ಯಾರ್ಥಿಗಳಲ್ಲಿ ಆರ್ಥಿಕ ಜ್ಞಾನವನ್ನು ವಿಸ್ತರಿಸಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.

ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ ಶೆಟ್ಟಿ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಐಸಿಎಐ ಉಡುಪಿ ಶಾಖೆಯ ಎಸ್.ಐ.ಸಿ.ಎ.ಎಸ್.ಎ ಅಧ್ಯಕ್ಷರಾದ ಸಿಎ ಮಾಧುರಿ ಪ್ರಭು ಸ್ವಾಗತಿಸಿ, ಕಾರ್ಯದರ್ಶಿ ಚಂದ್ರ ಎಸ್. ನಿರೂಪಿಸಿದರು. ಖಜಾಂಚಿ ಅಶ್ವಥ್ ಶೆಟ್ಟಿ ಅತಿಥಿ ಪರಿಚಯ ನೀಡಿದರು. ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ಕಾವ್ಯಶ್ರೀ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!