ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Entrepreneurship ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಶೇ. 70% ಮೊತ್ತ ಅಥವಾ ಗರಿಷ್ಠ ರೂ. 5.00 ಲಕ್ಷಗಳ ಸಹಾಯಧನ ನೀಡಲಾಗುತ್ತಿದ್ದು ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 04 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳು ಸೇರಿದಂತೆ ಒಟ್ಟು 07 ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿದ್ದು, 20 ರಿಂದ 55 ವರ್ಷ ವಯೋಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 13. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, 2 ನೇ ಮಹಡಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.




By
ForthFocus™