Wednesday, March 25, 2026
Wednesday, March 25, 2026

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮಹಿಳಾ ಘಟಕ ಉದ್ಘಾಟನೆ; ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮಹಿಳಾ ಘಟಕ ಉದ್ಘಾಟನೆ; ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ

Date:

ಉಡುಪಿ, ಮಾ.2: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮಹಿಳಾ ಘಟಕ ಇದರ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಮಣಿಪಾಲ ಸರಳೀಬೆಟ್ಟು ರತ್ನ ಸಂಜೀವ ಕಲಾಭವನದಲ್ಲಿ ನಡೆಯಿತು.

ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಮಹೇಶ್ ಠಾಕೂರ್ ರವರು ಭಾಗವಹಿಸಿದರು. ಜಾನಪದ ಕಲೆಯ ಉತ್ತೇಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವಿಶೇಷ ಒತ್ತು ನೀಡುತ್ತಿರುವ ಸಲುವಾಗಿ ಮಹೇಷ್ ಠಾಕೂರ್ ಅವರಿಗೆ ಘಟಕದ ವತಿಯಿಂದ ‘ಜಾನಪದ ಪ್ರಚಂಡ’ ಜಿಲ್ಲಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕನ್ನಡ ಜಾನಪದ ಪರಿಷತ್ ಬೆಂಗಳೂರು ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್ ಬಾಲಾಜಿ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ವಿಭಾಗಿಯ ಸಂಚಾಲಕರಾದ ಡಾ. ಭಾರತಿ ಮರವಂತೆ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಉಷಾ ಹೆಬ್ಬಾರ್, ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ನಗರಸಭಾ ಮಾಜಿ ಸದಸ್ಯ ನರಸಿಂಹ ನಾಯಕ್, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು. ಪರಿಷತ್ ಸದಸ್ಯರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಹಭಾಗೀ ಸಾಮಾಜಿಕ ಸಂಶೋಧನೆ ಇಂದಿನ ಅಗತ್ಯ: ಪ್ರೊ. ಸುನೀತಾ ವಿ

ಮಂಗಳೂರು, ಮಾ.25: ಸಮಾಜವಿಜ್ಞಾನಗಳ ಸಂಶೋಧನೆಯು ಪ್ರಶ್ನೆಗಳಿಗೆ ಮಾತ್ರ ಸೀಮಿತವಾಗದೆ ಸಂಶೋಧಕನ ಅನುಭಾವದ...

ಇನ್‌ಸ್ಪೆರ್ ಅವಾರ್ಡ್ ಸ್ಪರ್ಧೆಗೆ ಸುಜಯ್ ಗಾಣಿಗ ಆಯ್ಕೆ

ಗಂಗೊಳ್ಳಿ, ಮಾ.25: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು...

ಮಾ.27: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಮಾ.25: ಮಾರ್ಚ್ 27 ರಂದು ಶುಕ್ರವಾರ ಬೆಳಗ್ಗೆ 10:30 ಗಂಟೆಗೆ...
error: Content is protected !!