Sunday, July 26, 2026
Sunday, July 26, 2026

ಸಿಎ ಪರೀಕ್ಷೆ: ಡಾ.ಎನ್.ಎಸ್.ಎ.ಎಮ್. ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ರೋಸ್ ಡಿ’ಸಿಲ್ವಾ ಉತ್ತೀರ್ಣ

ಸಿಎ ಪರೀಕ್ಷೆ: ಡಾ.ಎನ್.ಎಸ್.ಎ.ಎಮ್. ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ರೋಸ್ ಡಿ’ಸಿಲ್ವಾ ಉತ್ತೀರ್ಣ

Date:

ಕಾರ್ಕಳ, ಮಾ.5: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ ಐಸಿಎಐ ಜನವರಿ 2026 ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿನಿ ರೋಸ್ ಡಿ’ಸಿಲ್ವಾ ಅತ್ಯುತ್ತಮ ಅಂಕ ಗಳಿಸುವ ಮೂಲಕ ತೇರ್ಗಡೆಯಾಗಿದ್ದಾರೆ. ಇವರು ಕಾರ್ಕಳದ ಕರಿಯಕಲ್ಲಿನ ಸಿಂಥಿಯಾ ಡಿ’ಸಿಲ್ವಾ ಮತ್ತು ಕ್ಯಾರೆಲ್ ಡಿ’ಸಿಲ್ವಾ ದಂಪತಿ ಪುತ್ರಿ. ಡಾ.ಎನ್.ಎಸ್.ಎ.ಎಮ್. ಪ್ರಥಮ ದರ್ಜೆ ಕಾಲೇಜಿನಲ್ಲಿ 2018 ರಿಂದ 2021ನೇ ಸಾಲಿನಲ್ಲಿ ಬಿಕಾಂ ಪದವಿ ಪೂರೈಸಿದ ಇವರು 2021 ರ ಎಪ್ರಿಲ್- ಮೇ ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತಿಮ ಪರೀಕ್ಷೆಯಲ್ಲಿ ಬಿಕಾಂ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿರುತ್ತಾರೆ.

2022 ರ ಮೇಯಲ್ಲಿ ಇಂಟರ್ ಮೀಡಿಯೇಟ್ ಗ್ರೂಪ್ ಒಂದರ ಪರೀಕ್ಷೆ ತೇರ್ಗಡೆಯಾದ ಇವರು, ಗ್ರೂಪ್ ಎರಡರ ಪರೀಕ್ಷೆಯನ್ನು 2023 ರ ಮೇಯಲ್ಲಿ ತೇರ್ಗಡೆಯಾಗಿದ್ದರು. ಸತತ ಪ್ರಯತ್ನ ಮತ್ತು ಸ್ವಯಂ ಕಲಿಕೆಯ ಮುಖಾಂತರ ಇದೀಗ ಸಿ.ಎ. ಪದವಿಯನ್ನು ಪಡೆದಿರುತ್ತಾರೆ. ಇವರಿಗೆ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ವಿಶಾಲ್ ಹೆಗ್ಡೆ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ.ಎಸ್.ಮೂಡಿತ್ತಾಯ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ವೀಣಾ ಕುಮಾರಿ ಬಿ.ಕೆ, ಕಾಲೇಜಿನ ಅಧ್ಯಾಪಕ ಅಧ್ಯಾಪಕೇತರ ಬಳಗ ಶುಭ ಹಾರೈಸಿ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!