ಕಾಪು, ಮಾ.6: ಕಾಪು ತಹಸೀಲ್ದಾರ ಕಚೇರಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಸಭೆಯಲ್ಲಿ ನಮೂನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 2 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸರ್ವೆ ಪರಿಶೀಲನಾ ವರದಿಗೆ ಹಾಗೂ 2 ಕಡತಗಳಿಗೆ ತಾತ್ಕಾಲಿಕ ಮಂಜೂರಾತಿ ನೀಡಿ, 1 ಕಡತವನ್ನು ಕಾಯ್ದಿರಿಸಿಲಾಯಿತು.
ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ ಅಂನತ ಶಂಕರ್, ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.




By
ForthFocus™