Saturday, July 25, 2026
Saturday, July 25, 2026

ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ

ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ

Date:

ಮುದ್ರಾಡಿ, ಮಾ.6: ಜಾನಪದವು ನಮ್ಮ ನಾಡಿನ ಮಣ್ಣಿನ ಸೊಗಡಾಗಿದೆ ಅದನ್ನು ಮುಂದಿನ ತಲೆಮಾರಿಗೆ ಪರಿಚಯಿಸಬೇಕಾಗಿದೆ ಎಂದು ರಾಜ್ಯ ಸರ್ಕಾರದ ನಾರಾಯಣ ಗುರು ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಮಂಜುನಾಥ್ ಪೂಜಾರಿಹೇಳಿದರು. ಅವರು ಕನ್ನಡ ಜಾನಪದ ಪರಿಷತ್ ಬೆಂಗಳೂರು ಉಡುಪಿ ಜಿಲ್ಲಾ ಘಟಕದ ವತಿಯಿಂದ ಹೆಬ್ರಿ ತಾಲೂಕಿನ ಮುದ್ರಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಭಾಂಗಣದಲ್ಲಿ ನಡೆದ ಜಾನಪದ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಜನಪದರು ತಮ್ಮಲ್ಲಿರುವ ಅಪೂರ್ವವಾದ ಜನಪದ ಸಂಪತ್ತನ್ನು ಈ ನಾಡಿಗೆ ನೀಡಿದ್ದಾರೆ. ತುಳುನಾಡಿನ ಕಂಬಳ ಸೇರಿದಂತೆ ವಿವಿಧ ಜನಪದ ಕಲೆಗಳಿಗೆ ಸರ್ಕಾರ ಅನುದಾನ ನೀಡುವ ಕೆಲಸ ಮಾಡುತ್ತಿದೆ ಎಂದರು. ಸಭಾಧ್ಯಕ್ಷತೆಯನ್ನು ಕನ್ನಡ ಜನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ವಹಿಸಿ ಕನ್ನಡ ಜಾನಪದ ಪರಿಷತ್ ಗ್ರಾಮ ಗ್ರಾಮಗಳಲ್ಲಿ ಘಟಕಗಳನ್ನು ಹೊಂದಿ ತನ್ನ ವಿನೂತನ ಮತ್ತು ವೈವಿಧ್ಯಪೂರ್ಣ ಕಾರ್ಯಕ್ರಮಗಳಿಂದ ರಾಜ್ಯದ ಮನೆ ಮಾತಾಗಿದೆ. ರಾಜ್ಯಾಧ್ಯಕ್ಷ ಡಾ. ಎಸ್ ಬಾಲಾಜಿ ನೇತೃತ್ವದಲ್ಲಿ ನಮ್ಮ ಜಿಲ್ಲೆಯಲ್ಲಿಯೂ ಅತ್ಯುತ್ತಮ ಕಾರ್ಯ ನಡೆಯುತ್ತಿದೆ ಎಂದರು.

ವೇದಿಕೆಯಲ್ಲಿ ಗ್ರಾಮ ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಉಮೇಶ್ ಸಂತೋಷ್ ಕುಮಾರ್ ಶೆಟ್ಟಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮಮತಾ ಸೇವಾ ನಿರತೆ ಅಮಿತಾ ಭಂಡಾರಿ, ಸನತ್ ಕುಮಾರ್ ಮಾಜಿ ಸದಸ್ಯ ಮುಂತಾದವರು ಉಪಸ್ಥಿತರಿದ್ದರು.

ಜನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮತ್ತು ಹಿರಿಯ ನಾಟಿ ವೈದ್ಯರಾದ ಗುಲಾಬಿ ಮತ್ತು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಾಜ ಸೇವಕಿ ಶಶಿಕಲಾ ಡಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!