Saturday, October 17, 2026
Saturday, October 17, 2026

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

Date:

ಉಡುಪಿ, ಮಾ.7: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು, ಉಡುಪಿ ಇದರ ಐಟಿಕ್ಲಬ್‌ನ 2025–26ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಮೊಹನದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ವಹಿಸಿದ್ದರು. ವಿದ್ಯಾರ್ಥಿಗಳು ತಾಂತ್ರಿಕ ಹಾಗೂ ವಿಶ್ಲೇಷಣಾತ್ಮಕ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳುವುದು ಇಂದಿನ ಐಟಿ ಕ್ಷೇತ್ರದಲ್ಲಿ ಅತ್ಯಂತ ಅಗತ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್ ಮಣಿಪಾಲದ ಆನ್‌ಲೈನ್ ಶಿಕ್ಷಣ ನಿರ್ದೇಶನಾಲಯದ ಎಂಸಿಎ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಪೂರ್ಣಿಮಾ ಶೆಟ್ಟಿ ಅವರು ಉಪನ್ಯಾಸ ನೀಡಿದರು. ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಅವರು ಕೃತಕ ಬುದ್ಧಿಮತ್ತೆಯ ಮಹತ್ವ ಮತ್ತು ಅದರ ಶಿಕ್ಷಣ, ವ್ಯಾಪಾರ ಹಾಗೂ ತಂತ್ರಜ್ಞಾನ ಕ್ಷೇತ್ರಗಳ ಮೇಲೆ ಇರುವ ಪ್ರಭಾವದ ಬಗ್ಗೆ ಮಾತನಾಡಿದರು. ಬಿಬಿಎ ಮತ್ತು ಬಿಕಾಂ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಡಾ. ರೇಖಾ ಎನ್. ಚಂದ್ರ ಹಲವರು ಉಪಸ್ಥಿತರಿದ್ದರು. ಐಟಿ ಕ್ಲಬ್ ಸಂಯೋಜಕಿ ಅಂಜಲಿನ್‌ ಜೊವಿಟಾ ಅತಿಥಿಗಳನ್ನು ಸ್ವಾಗತಿಸಿದರು.

ಐಟಿ ಕ್ಲಬ್ ಕಾರ್ಯದರ್ಶಿ ದರ್ಶನ್ ಅತಿಥಿಗಳನ್ನು ಪರಿಚತಯಿಸಿದರು. ಕೊನೆಯಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಅನ್ವಿತಾ ವಂದನಾರ್ಪಣೆ ಸಲ್ಲಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಉನ್ನತಿ ಕಾರ್ಯಕ್ರಮವನ್ನು ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!