Tuesday, March 10, 2026
Tuesday, March 10, 2026

ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ಕಾಮಗಾರಿ ವೀಕ್ಷಣೆ

ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ಕಾಮಗಾರಿ ವೀಕ್ಷಣೆ

Date:

ಉಡುಪಿ, ಮಾ.9: ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿ ಸೇತುವೆವರೆಗಿನ ಇಕ್ಕೆಲಗಳಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ವೀಕ್ಷಿಸಿ ಪರಿಶೀಲನೆ ನಡೆಸಿದರು. ಕಾಮಗಾರಿ ವೇಗವಾಗಿ ನಡೆಯುತ್ತಿದ್ದರೂ ಭೂ ಮಾಲಿಕರಿಗೆ ಪರಿಹಾರ ನೀಡದಿರುವುದು, ಭಾಗಶಃ ಸ್ವಾಧೀನವಾದ ಭೂಮಿಗಳಿಗೆ ಪೋಡಿ ರಚನೆಯಲ್ಲಾದ ವಿಳಂಬದಿಂದ ಹಣ ಪಾವತಿಯ ಸಮಸ್ಯೆ, ವಿದ್ಯುತ್ ಕಂಬಗಳ ಸ್ಥಳಾಂತರದ ಸಮಸ್ಯೆಯಿಂದ ಮರಗಳ ತೆರವಿಗೆ ಅಡಚಣೆ, ಮುಂತಾದ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಹಾಗೊಂದು ವೇಳೆ ಭೂ ಮಾಲಿಕರ ಖಾತಾ ಸಮಸ್ಯೆಗಳಿದ್ದಲ್ಲಿ ಅಥವಾ ವ್ಯಾಜ್ಯ, ತಕರಾರುಗಳಿದ್ದಲ್ಲಿ ಪರಿಹಾರದ ಹಣವನ್ನು ಅವರ ಹೆಸರಲ್ಲಿ ಠೇವಣಿ ಇರಿಸುವಂತೆ ಸೂಚಿಸಿದೆ. ಮತ್ತು ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮರಗಳ ತೆರವಿಗೆ ಅನುಮತಿ ನೀಡುವಂತೆ ಸಂಸದರು ಸ್ಥಳದಲ್ಲೇ ತಿಳಿಸಿದರು.

ಹಲವು ದಿನಗಳಿಂದ ಕಂಬಗಳ ಸ್ಥಳಾಂತರಕ್ಕೆ ಕಾಯುತ್ತಿದ್ದೇವೆ, ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿ ಎಂದು ಸ್ಥಳೀಯರು ತಿಳಿಸಿದಾಗ, ಶಾಲಾ ಮಕ್ಕಳ ಪರೀಕ್ಷೆ ಅವಧಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಸ್ಥಗಿತಗೊಳಿಸಿ ಕಂಬಗಳ ತೆರವಿಗೆ ಅವಕಾಶ ಕಲ್ಪಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು. ಸುಮಾರು 2 ಕಿ.ಮೀ ರಸ್ತೆಯಲ್ಲಿ ಸಂಚರಿಸಿ ಅಧಿಕಾರಿಗಳ ತಂಡಕ್ಕೆ ಸಮರ್ಪಕ ದಾಖಲೆ ನೀಡಿದವರಿಗೆ ಒಂದು ವಾರದಲ್ಲಿ ಹಣ ಪಾವತಿ ಮಾಡುವಂತೆ, 3ಡಿ ಅಪೂರ್ಣವಾದವರಿಗೆ 15 ದಿನಗಳ ಒಳಗೆ ಪರಿಹಾರ ನೀಡುವಂತೆ ತಿಳಿಸಿ ಯಾವುದೇ ಕಾರಣಕ್ಕೂ ವಿಳಂಬವಿಲ್ಲದೆ ರಸ್ತೆ ಕೆಲಸ ಮಳೆಗಾಲದೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಕುಂದಾಪುರದ ಸಹಾಯಕ ಕಮಿಷನರ್ ರಶ್ಮಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಸುಧಾಕರ್ ನಾಯಕ್, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾದ ಲೋಕೇಶ್ ಶಶಿಧರ್ ನವೀನ್, ಗ್ರಾಮ ಆಡಳಿತ ಅಧಿಕಾರಿ ಕಾರ್ತಿಕೇಯ, ಮಾಜಿ ನಗರಸಭಾ ಸದಸ್ಯರಾದ ಸುಂದರ ಕಲ್ಮಾಡಿ, ಮಲ್ಪೆ ಠಾಣಾಧಿಕಾರಿ ಈರಣ್ಣ ಶಿರಗುಪ್ಪಿ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ನೂತನ ಅಗ್ನಿಶಾಮಕದಳ ಘಟಕಕ್ಕೆ ಶಿಲಾನ್ಯಾಸ

ಮಣಿಪಾಲ, ಮಾ.9: ಮಣಿಪಾಲದ ಅದರ್ಶನಗರದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನೂತನವಾಗಿ...

ದ.ಕ. ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

ಉಡುಪಿ, ಮಾ.9: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು...

ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ ಎ ಗಫೂರ್

ಉಡುಪಿ, ಮಾ.9: ತಮ್ಮ ಜೀವಿತಾವಧಿಯಲ್ಲಿ ಮಹಿಳೆಯರು ತಾಯಿ, ಸಹೋದರಿ, ಹೆಂಡತಿ, ಮಗಳು...

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು, ಮಾ.೯: ತೊಟ್ಟಿಲನ್ನು ತೂಗುವ ಕೈ ದೇಶವನ್ನಾಳಬಲ್ಲದು, ಮಹಿಳೆ ಶಿಕ್ಷಿತಳಾದರೆ ಇಡೀ...
error: Content is protected !!