Sunday, September 6, 2026
Sunday, September 6, 2026

ದ.ಕ. ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

ದ.ಕ. ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

Date:

ಉಡುಪಿ, ಮಾ.9: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗಾಗಿ ಕೊಡುಗೆಯಾಗಿ ನೀಡಿದ ಎಕ್ಸ್ ರೇ ಯಂತ್ರದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ನೇವರಿಸಿದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಇತ್ತೀಚೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಎಕ್ಸ್ ರೇ ಸೇವೆಯಲ್ಲಿ ವ್ಯತ್ಯಯದಿಂದ ರೋಗಿಗಳಿಗೆ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮೀನು ಮಾರಾಟ ಫೆಡರೇಶನ್ ಮೂಲಕ ಜಿಲ್ಲಾಸ್ಪತ್ರೆಗೆ ನೂತನ ಎಕ್ಸ್ ರೇ ಯಂತ್ರವನ್ನು ನೀಡಿದ್ದು, ಇದರಿಂದ ಜಿಲ್ಲಾಸ್ಪತ್ರೆಯಲ್ಲಿ ದಿನನಿತ್ಯ ಚಿಕಿತ್ಸೆಗೆ ಬರುವ ನೂರಾರು ರೋಗಿಗಳಿಗೆ ಸಹಕಾರಿಯಾಗಲಿದೆ ಎಂದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಅಶೋಕ್ ಮಾತನಾಡಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗೆ ಎಕ್ಸ್ ರೇ ಯಂತ್ರವನ್ನು ಮೀನು ಮಾರಾಟ ಫೆಡರೇಶನ್ ವತಿಯಿಂದ ಕೊಡುಗೆಯಾಗಿ ನೀಡಿದ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರಿಗೆ ಜಿಲ್ಲಾಸ್ಪತ್ರೆಯ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಮೀನು ಮಾರಾಟ ಫೆಡರೇಷನ್ ಉಪಾಧ್ಯಕ್ಷರಾದ ದೇವಪ್ಪ ಕಾಂಚನ್, ನಿರ್ದೇಶಕರಾದ ರಾಮಚಂದ್ರ ಕುಂದರ್, ಸುರೇಶ್ ಸಾಲ್ಯಾನ್, ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸದಸ್ಯರಾದ ರಶ್ಮಿ ಸಿ. ಭಟ್, ಸುಂದರ ಕಲ್ಮಾಡಿ, ಯೋಗೀಶ್ ಸಾಲ್ಯಾನ್, ಟಿ. ಜಿ. ಹೆಗ್ಡೆ, ಹರೀಶ್ ಶೆಟ್ಟಿ, ಎಡ್ಲಿನ್ ಕರ್ಕಡ, ಮೀನುಗಾರ ಮುಖಂಡರಾದ ದಯಾನಂದ ಸುವರ್ಣ, ಜಗನ್ನಾಥ ಕಡೆಕಾರ್, ಸುಭಾಷ್ ಮೆಂಡನ್, ಸತೀಶ್ ಕುಂದರ್, ನಾಗರಾಜ ಸುವರ್ಣ, ರತ್ನಾಕರ ಸಾಲ್ಯಾನ್, ಸುಂದರ ಸಾಲ್ಯಾನ್, ವಿನಯ ಕರ್ಕೇರ, ಕರುಣಾಕರ ಸಾಲ್ಯಾನ್, ನಾಗರಾಜ ಕುಂದರ್, ಮಿಥುನ್ ಕುಂದರ್, ಕೃಷ್ಣ ಕೋಟ್ಯಾನ್, ಗೀತಾ ಕರ್ಕೇರ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ್ ಕುಲಾಲ್, ಪ್ರಮುಖರಾದ ಸುನೀಲ್ ನೇಜಾರು, ಸುಭಾಷಿತ್, ರಾಘವೇಂದ್ರ ಆಚಾರ್ಯ, ಸುನೀತಾ ಭಂಡಾರಿ, ಸುಧಾಕರ ಪ್ರಭು, ಉಡುಪಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ, ವೈದ್ಯರಾದ ಡಾ. ಆಮ್ನ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!