Tuesday, March 10, 2026
Tuesday, March 10, 2026

ಮಣಿಪಾಲ: ನೂತನ ಅಗ್ನಿಶಾಮಕದಳ ಘಟಕಕ್ಕೆ ಶಿಲಾನ್ಯಾಸ

ಮಣಿಪಾಲ: ನೂತನ ಅಗ್ನಿಶಾಮಕದಳ ಘಟಕಕ್ಕೆ ಶಿಲಾನ್ಯಾಸ

Date:

ಮಣಿಪಾಲ, ಮಾ.9: ಮಣಿಪಾಲದ ಅದರ್ಶನಗರದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಗ್ನಿಶಾಮಕ ದಳದ ಕಚೇರಿ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮಣಿಪಾಲ ನಗರದ ಬಹು ವರ್ಷಗಳ ಬೇಡಿಕೆಯಾಗಿದ್ದ ಅಗ್ನಿಶಾಮಕ ದಳ ಘಟಕಕ್ಕೆ ನನ್ನ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರ ಆಗ್ನಿ ಶಾಮಕ ದಳವನ್ನು ಮಂಜೂರು ಮಾಡಿದ್ದು, ಇದೀಗ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಮಣಿಪಾಲ ಕೈಗಾರಿಕಾ ಪ್ರದೇಶ, ಬೃಹತ್ ವಸತಿ ಸಮುಚ್ಚಯಗಳನ್ನು ಒಳಗೊಂಡ ಮಣಿಪಾಲ ನಗರಕ್ಕೆ ತುರ್ತು ಸಂದರ್ಭದಲ್ಲಿ ಉಡುಪಿಯಿಂದ ಅಗ್ನಿಶಾಮಕ ವಾಹನ ಬರುವ ಅನಿವಾರ್ಯತೆಯಿಂದ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಲು ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಭಾಗಕ್ಕೆ ಅತ್ಯವಶ್ಯಕವಾಗಿದ್ದ ಅಗ್ನಿಶಾಮಕದಳ ಶೀಘ್ರ ಕಾರ್ಯಾರಂಭಗೊಳ್ಳುವ ಮೂಲಕ ಜನರ ಸೇವೆಗೆ ಲಭ್ಯವಾಗಲಿದೆ ಎಂದರು.

ಮಣಿಪಾಲ ವಾರ್ಡಿನ ಮಾಜಿ ನಗರಸಭಾ ಸದಸ್ಯರಾದ ಮಂಜುನಾಥ ಮಣಿಪಾಲ ಮಣಿಪಾಲ ಭಾಗಕ್ಕೆ ಅತೀ ಅವಶ್ಯಕವಾಗಿದ್ದ ಅಗ್ನಿಶಾಮಕದಳ ಘಟಕ ಆರಂಭಕ್ಕೆ ವಿಶೇಷ ಮುತುವರ್ಜಿವಹಿಸಿ ಮಂಜೂರು ಮಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಶಾಸಕ ಯಶ್ ಪಾಲ್ ಸುವರ್ಣ ಅವರಿಗೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.

ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ, ಹರೀಶ್ ಶೆಟ್ಟಿ, ಟಿ ಜಿ ಹೆಗಡೆ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಈಶ್ವರ ನಗರ ವಾರ್ಡ್ ಅಧ್ಯಕ್ಷರಾದ ಸುರೇಶ್ ಆಚಾರ್ಯ, ಕಾರ್ಯದರ್ಶಿ ಕೃಷ್ಣ ನಾಯ್ಕ್, ಪ್ರಮುಖರಾದ ನರಸಿಂಹ ನಾಯಕ್, ಪೃಥ್ವಿರಾಜ್, ನಿತಿನ್ ಪೈ, ಗುರುರಾಜ್ ಭಂಡಾರಿ, ಸತೀಶ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದ.ಕ. ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

ಉಡುಪಿ, ಮಾ.9: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು...

ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ಕಾಮಗಾರಿ ವೀಕ್ಷಣೆ

ಉಡುಪಿ, ಮಾ.9: ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್ ನಿಂದ...

ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ ಎ ಗಫೂರ್

ಉಡುಪಿ, ಮಾ.9: ತಮ್ಮ ಜೀವಿತಾವಧಿಯಲ್ಲಿ ಮಹಿಳೆಯರು ತಾಯಿ, ಸಹೋದರಿ, ಹೆಂಡತಿ, ಮಗಳು...

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು, ಮಾ.೯: ತೊಟ್ಟಿಲನ್ನು ತೂಗುವ ಕೈ ದೇಶವನ್ನಾಳಬಲ್ಲದು, ಮಹಿಳೆ ಶಿಕ್ಷಿತಳಾದರೆ ಇಡೀ...
error: Content is protected !!